ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ..

03 Apr 2026, 9:13 am KANNADA SAKSHI

ಜನಪರ ಕೆಲಸ ಮಾಡುತ್ತಾ ಭಾರೀ ಹೆಸರು ಮಾಡಿದ್ದ ಕಾಂಗ್ರೆಸ್‌ನ (Congress) ರೈತ ಮೋರ್ಚಾ ಮುಖಂಡ ಶಿವಲಿಂಗಪ್ಪ (50) ಅವರ ಶವ ಅನುಮಾನಾಸ್ಪದವಾಗಿ ಚಿತ್ರದುರ್ಗದ (Chitradurga) ರಾಷ್ಟ್ರೀಯ ಹೆದ್ದಾರಿ 48ರ ಬಳಿ ಪತ್ತೆಯಾಗಿದೆ.

ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಶಿವಲಿಂಗಪ್ಪ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಸಂಬಂಧಿಗಳು, ಸ್ನೇಹಿತರು ಹಾಗೂ ನೆಂಟರಿಷ್ಟರ ಮನೆಗಳಲ್ಲಿ ವಿಚಾರಿಸಿದರೂ ಶಿವಲಿಂಗಪ್ಪ ಪತ್ತೆಯಾಗಿರಲಿಲ್ಲ. ಅವರ ಸೋದರ ಅಳಿಯ ಬಸವರಾಜ್ ಚಿತ್ರದುರ್ಗದ ನಗರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಕಳೆದ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಗರದ ಮಹೇಶ್ವರಿ ಲೇಔಟ್ ಇರುವ ಬಗ್ಗೆ ಅವರ ಮೊಬೈಲ್ ಲೊಕೇಶನ್ ಪೊಲೀಸರಿಗೆ ಮಾಹಿತಿ ನೀಡಿತ್ತು. ಅವರ ಮೊಬೈಲ್ ಸ್ವಿಚ್ಡ್ ಆಫ್ ಆದ‌ ಸ್ಥಳದಲ್ಲೇ ಶವವಾಗಿ ಪತ್ತೆಯಾಗಿರೋದು ‌ಅವರ ಕುಟುಂಬಸ್ಥರಲ್ಲಿ‌ ಬಾರೀ ಅನುಮಾನಕ್ಕೆ ಕಾರಣವಾಗಿದೆ. ಅವರ ಮುಖ ಗುರುತು ಸಿಗದ ಸ್ಥಿತಿಯಲ್ಲಿದ್ದು, ಸಂಪೂರ್ಣ ದೇಹ ಕೊಳೆತ ಸ್ಥಿತಿಯಲ್ಲಿತ್ತು.

ಶವವನ್ನು ನೋಡಿದ ಬಳಿಕ ಅವರ ಸೋದರಳಿಯ ಬಸವರಾಜ್ ಸೇರಿದಂತೆ ಇತರ ಸಂಬಂಧಿಕರೆಲ್ಲರೂ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಸೂಕ್ತ, ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS