ಚುನಾವಣಾ ಆಯೋಗದ ನಡೆ ಶಂಕಾಸ್ಪದ; ಮಹಾರಾಷ್ಟ್ರದಲ್ಲಿ ಮೌನ, ರಾಜ್ಯದಲ್ಲಿ ಪ್ರಶ್ನೆ ಏಕೆ?: ಸಿದ್ದರಾಮಯ್ಯ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಚುನಾವಣಾ ಆಯೋಗದ ನಡೆ ಶಂಕಾಸ್ಪದ; ಮಹಾರಾಷ್ಟ್ರದಲ್ಲಿ ಮೌನ, ರಾಜ್ಯದಲ್ಲಿ ಪ್ರಶ್ನೆ ಏಕೆ?: ಸಿದ್ದರಾಮಯ್ಯ

08 Apr 2026, 11:27 pm KANNADA SAKSHI

ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆಯ ನೀತಿ ತಾಳಿದೆ. ಇಲ್ಲಿನ ಪ್ರೇರಣೆಯಿಂದಲೇ ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುತ್ತಿದೆ. ಇನ್ನೂ ನಮ್ಮ ಯೋಜನೆಗಳಿಗೆ ಚುನಾವಣೆಗಾಗಿ ಮತದಾರರ ಸೆಳೆಯಲು ನೀಡಿದ ಯೋಜನೆಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಚುನಾವಣೆ ಆಯೋಗದ ಪ್ರಶ್ನೆಗೆ ಉತ್ತರಿಸಿದ್ದಾರೆ.

ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಈ ಸಂಬಂಧ ಬುಧವಾರ ಅವರು ಎಕ್ಸ್‌ ಪೊಸ್ಟ್ ಮೂಲಕ ಉತ್ತರ ನಿಡಿದ್ದಾರೆ.

Guarantees

ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ ಸ್ಪಷ್ಟಪಡಿಸುತ್ತಿದ್ದೇನೆ. ಇವು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ ಎಂದು ತಿಳಿಸಿದ್ದಾರೆ.

'ಬಿಟ್ಟಿ ಭಾಗ್ಯ' ಎನ್ನುವ ಬಿಜೆಪಿಯಿಂದ ಬೇರೆ ರಾಜ್ಯಗಳಲ್ಲಿ ಜಾರಿ

ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು 'ಬಿಟ್ಟಿ ಭಾಗ್ಯ' ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಚಾಟಿ ಬೀಸಿದ್ದಾರೆ.

ಚುನಾವಣಾ ಆಯೋಗ ನೀತಿ ಅನುಮಾನಾಸ್ಪದ

ಆದರೆ ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನ ವಹಿಸಿತ್ತು. ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು ಎಂದು ಅವರು ವಿವರಿಸಿದರು.

ಚುನಾವಣೆ ಆಯೋಗದ ಪಕ್ಷಪಾತ ಬಯಲು; ಸಿಎಂ

ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ.

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ. ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ.

ನುಡಿದಂತೆ ನಡೆಯುವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Generating image…

‘ಬಿಟ್ಟಿ ಭಾಗ್ಯ’ ಎನ್ನುವ ಬಿಜೆಪಿಯಿಂದ ಬೇರೆ ರಾಜ್ಯಗಳಲ್ಲಿ ಜಾರಿ

ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ ಭಾಗ್ಯ’ ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಚಾಟಿ ಬೀಸಿದ್ದಾರೆ.

ಚುನಾವಣಾ ಆಯೋಗ ನೀತಿ ಅನುಮಾನಾಸ್ಪದ

ಆದರೆ ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನ ವಹಿಸಿತ್ತು. ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು ಎಂದು ಅವರು ವಿವರಿಸಿದರು.

ಚುನಾವಣೆ ಆಯೋಗದ ಪಕ್ಷಪಾತ ಬಯಲು; ಸಿಎಂ

ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ.

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ. ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ.

ನುಡಿದಂತೆ ನಡೆಯುವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Editor Reporter
kannadasakshi.in

ಚುನಾವಣಾ ಆಯೋಗದ ನಡೆ ಶಂಕಾಸ್ಪದ; ಮಹಾರಾಷ್ಟ್ರದಲ್ಲಿ ಮೌನ, ರಾಜ್ಯದಲ್ಲಿ ಪ್ರಶ್ನೆ ಏಕೆ?: ಸಿದ್ದರಾಮಯ್ಯ

ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆಯ ನೀತಿ ತಾಳಿದೆ. ಇಲ್ಲಿನ ಪ್ರೇರಣೆಯಿಂದಲೇ ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುತ್ತಿದೆ. ಇನ್ನೂ ನಮ್ಮ ಯೋಜನೆಗಳಿಗೆ ಚುನಾವಣೆಗಾಗಿ ಮತದಾರರ ಸೆಳೆಯಲು ನೀಡಿದ ಯೋಜನೆಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಚುನಾವಣೆ ಆಯೋಗದ ಪ್ರಶ್ನೆಗೆ ಉತ್ತರಿಸಿದ್ದಾರೆ.

ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಈ ಸಂಬಂಧ ಬುಧವಾರ ಅವರು ಎಕ್ಸ್‌ ಪೊಸ್ಟ್ ಮೂಲಕ ಉತ್ತರ ನಿಡಿದ್ದಾರೆ.

Guarantees

ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ ಸ್ಪಷ್ಟಪಡಿಸುತ್ತಿದ್ದೇನೆ. ಇವು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ ಎಂದು ತಿಳಿಸಿದ್ದಾರೆ.

'ಬಿಟ್ಟಿ ಭಾಗ್ಯ' ಎನ್ನುವ ಬಿಜೆಪಿಯಿಂದ ಬೇರೆ ರಾಜ್ಯಗಳಲ್ಲಿ ಜಾರಿ

ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು 'ಬಿಟ್ಟಿ ಭಾಗ್ಯ' ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಚಾಟಿ ಬೀಸಿದ್ದಾರೆ.

ಚುನಾವಣಾ ಆಯೋಗ ನೀತಿ ಅನುಮಾನಾಸ್ಪದ

ಆದರೆ ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನ ವಹಿಸಿತ್ತು. ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು ಎಂದು ಅವರು ವಿವರಿಸಿದರು.

ಚುನಾವಣೆ ಆಯೋಗದ ಪಕ್ಷಪಾತ ಬಯಲು; ಸಿಎಂ

ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ.

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ. ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ.

ನುಡಿದಂತೆ ನಡೆಯುವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS