ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ (Forest Land Encroachment Case) ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆಯಾಗಿದೆ. ಅರಣ್ಯ ಇಲಾಖೆಗೆ ಅರಣ್ಯ ಭೂಮಿ ಬಿಟ್ಟುಕೊಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.
Ramesh Kumar 3
2025ರ ಜನವರಿ 15 ಮತ್ತು 16 ರಂದು ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ (Forest Department) ಜಂಟಿ ಸರ್ವೇ ನಡೆಸಿ ವರದಿ ಸಲ್ಲಿಸಿತು. ವರದಿಯ ಸಂಬಂಧ ಕೆ.ಆರ್.ರಮೇಶ್ ಕುಮಾರ್ (Ramesh Kumar) ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಾಧಿಕಾರಿಗಳ (ಬೆಂಗಳೂರು ವೃತ್ತ) ನ್ಯಾಯಾಲಯ ಜಂಟಿ ಸಮೀಕ್ಷೆ ವರದಿ ಆಧರಿಸಿ ಅರಣ್ಯ ಭೂಮಿಯನ್ನ ಬಿಟ್ಟು ಕೊಡುವಂತೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇನ್ಮುಂದೆ ಬುಕ್ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ
Ramesh Kumar 2
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹೊಸಹುಡ್ಯ ಗ್ರಾಮದ ಸರ್ವೆ ನಂ.1 ಮತ್ತು 2 ರಲ್ಲಿ 60.23 ಎಕರೆ ಒತ್ತುವರಿ ಆರೋಪವಿದ್ದು, ಒತ್ತುವರಿ ಭೂಮಿ 64(0) ಅನ್ವಯ ತೆರವು ಗೊಳಿಸುವಂತೆ ಆದೇಶ ಹೊರಡಿಸಿದೆ. ಕೆ.ಆರ್ ರಮೇಶ್‌ಕುಮಾರ್ ಸಲ್ಲಿಸಿದ ಮೇಲ್ಮನವಿಗೆ ಅರ್ಹತೆ ಇಲ್ಲವೆಂದು ವಜಾಗೊಳಿಸಿ, ಈ ಆದೇಶವನ್ನು ಸ್ವೀಕರಿಸಿದ ದಿನಾಂಕದಿಂದ 30 (ಮೂವತ್ತು) ದಿನಗಳ ಒಳಗೆ ಮೇಲ್ಮನವಿದಾರರು ಅತಿಕ್ರಮಣ ಮಾಡಲಾದ ಭೂಮಿಯನ್ನು ಬಿಟ್ಟುಕೊಡಲು ಆದೇಶ ಹೊರಡಿಸಿ, ಶಾಂತಿಯುತವಾಗಿ ಹಸ್ತಾಂತರಿಸಬೇಕೆಂದು ನಿರ್ದೇಶಿಸಲಾಗಿದೆ. ನಿಗದಿತ ಅವಧಿಯೊಳಗೆ ಆದೇಶ ಪಾಲಿಸಲು ವಿಫಲವಾದರೆ, ಕೋಲಾರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅತಿಕ್ರಮಣವನ್ನು ತೆರವುಗೊಳಿಸಲು ಸೂಚನೆ ನೀಡಿದ್ದಾರೆ










