ವಿಶ್ವಕ್ಕೆ ಶಾಕ್‌ – ಇರಾನ್‌ನಿಂದ ಮತ್ತೆ ಹಾರ್ಮುಜ್ ಜಲಸಂಧಿ ಬಂದ್‌

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ವಿಶ್ವಕ್ಕೆ ಶಾಕ್‌ – ಇರಾನ್‌ನಿಂದ ಮತ್ತೆ ಹಾರ್ಮುಜ್ ಜಲಸಂಧಿ ಬಂದ್‌

20 Jun 2026, 8:58 pm KANNADA SAKSHI

ಲೆಬನಾನ್ ಮೇಲೆ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣಕಾರಿ ದಾಳಿಗಳಿಗೆ ಪ್ರತಿಯಾಗಿ ಇರಾನ್ ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait Of Hormuz) ಮತ್ತೆ ಮುಚ್ಚಿರುವುದಾಗಿ ಘೋಷಿಸಿದೆ. ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇತ್ತೀಚಿನ ಕದನ ವಿರಾಮ ಹಾಗೂ ಶಾಂತಿ ಒಪ್ಪಂದದ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿವೆ ಎಂದು ಇರಾನ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಒಪ್ಪಂದದ ಉಲ್ಲಂಘನೆಗೆ ಪ್ರತಿಯಾಗಿ ತಾವು ಕೈಗೊಂಡ ಮೊದಲ ಹೆಜ್ಜೆ ಇದಾಗಿದ್ದು, ಜಲಸಂಧಿಯ ಮೂಲಕ ನಡೆಯುವ ಹಡಗುಗಳ ಸಂಚಾರವನ್ನು ಬಂದ್ ಮಾಡಿರುವುದಾಗಿ ಇರಾನ್‌ನ ಉನ್ನತ ಜಂಟಿ ಮಿಲಿಟರಿ ಕಮಾಂಡ್ ಆದ ಖತಮ್ ಅಲ್-ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿ ತಿಳಿಸಿದೆ.
ಇಸ್ರೇಲ್ ಮತ್ತು ಅಮೆರಿಕದ ಮಿಲಿಟರಿ ಆಕ್ರಮಣಗಳು ಇದೇ ರೀತಿ ಮುಂದುವರಿದರೆ ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇರಾನ್ ಜಾಗತಿಕ ಸಮುದಾಯಕ್ಕೆ ಕಟು ಎಚ್ಚರಿಕೆ ನೀಡಿದೆ. ಇತ್ತೀಚೆಗಷ್ಟೇ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದಿದ್ದ ಶಾಂತಿ ಮಾತುಕತೆಗಳು ದಿಢೀರ್ ರದ್ದಾದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಇರಾನ್ ಜಲಸಂಧಿಯನ್ನು ಬಂದ್ ಮಾಡಿರುವುದು ಇಡೀ ವಿಶ್ವಕ್ಕೆ ದೊಡ್ಡ ಶಾಕ್ ನೀಡಿದೆ. ಈ ನಿರ್ಧಾರದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಪೂರೈಕೆಗೆ ಭಾರಿ ಅಡ್ಡಿಯಾಗಲಿದ್ದು, ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಎದುರಾಗುವ ಆತಂಕ ಮೂಡಿದೆ.
ಇನ್ನೊಂದೆಡೆ ಲೆಬನಾನ್ ದೇಶದ ಮೇಲೆ ಇಸ್ರೇಲ್ ತನ್ನ ಭೀಕರ ದಾಳಿಗಳನ್ನು ಮುಂದುವರಿಸಿದೆ. ಶನಿವಾರ (ಜೂನ್ 20) ದಕ್ಷಿಣ ಲೆಬನಾನ್ ಪ್ರದೇಶದಲ್ಲಿ ಇಸ್ರೇಲ್ ನಡೆಸಿದ ಭೀಕರ ಡ್ರೋನ್ ದಾಳಿಗೆ ಕನಿಷ್ಠ ಐದು ಜನ ಬಲಿಯಾಗಿದ್ದಾರೆ. ಇದಕ್ಕೂ ಮುನ್ನ, ಅಂದರೆ ಶುಕ್ರವಾರ (ಜೂನ್ 19) ಮುಂಜಾನೆ ದಕ್ಷಿಣ ಲೆಬನಾನ್‌ನ ಹಲವು ನಾಗರಿಕ ವಸತಿ ಪ್ರದೇಶಗಳ ಮೇಲೆ ಇಸ್ರೇಲ್ ವಾಯುಪಡೆ ನಡೆಸಿದ ಸರಣಿ ವೈಮಾನಿಕ ದಾಳಿಗಳಲ್ಲಿ (Israeli Strikes) ಕನಿಷ್ಠ 16 ಮಂದಿ ಅಮಾಯಕರು ಸಾವನ್ನಪ್ಪಿದ್ದರು. ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಶಾಂತಿಯನ್ನು ಬಯಸದೆ ಕೇವಲ ಯುದ್ಧವನ್ನೇ ಮುಂದುವರಿಸಲು ನೋಡುತ್ತಿದ್ದಾರೆ ಎನ್ನುವ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಪ್ರಾದೇಶಿಕ ಸಂಘರ್ಷ ಇಡೀ ಜಗತ್ತಿನ ಆರ್ಥಿಕತೆಯ ಮೇಲೆ ಕರಗದ ಕಪ್ಪು ಛಾಯೆ ಮೂಡಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS