ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸುವ ಕಾಲಾವಕಾಶವನ್ನು ಜುಲೈ 8ರ ಸಂಜೆ 4ರ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ನಂತರ, ಅರ್ಜಿ ತಿದ್ದುಪಡಿಗೆ ಜುಲೈ 10 ರಿಂದ 13ರ ವರೆಗೆ ಸಮಯ ನೀಡಲಾಗುವುದು. ಈ ಮುನ್ನ ಅರ್ಜಿ ಸಲ್ಲಿಸಲು ಜುಲೈ 3ರ ವರೆಗೆ ಹಾಗೂ ಶುಲ್ಕ ಪಾವತಿಸಲು ಜುಲೈ 4 ಕಡೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ










