ಹಿಂದಿನಂತೆ ಕಸದ ಬುಟ್ಟಿಗೆ ಹಾಕ್ಬೇಡಿ, ಮಧುಸೂದನ್ ನಾಯಕ್ ಸಮೀಕ್ಷಾ ವರದಿ ಅಧಿವೇಶನದಲ್ಲಿ ಮಂಡಿಸಿ: ಸುನಿಲ್ ಕುಮಾರ್ ಆಗ್ರಹ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಹಿಂದಿನಂತೆ ಕಸದ ಬುಟ್ಟಿಗೆ ಹಾಕ್ಬೇಡಿ, ಮಧುಸೂದನ್ ನಾಯಕ್ ಸಮೀಕ್ಷಾ ವರದಿ ಅಧಿವೇಶನದಲ್ಲಿ ಮಂಡಿಸಿ: ಸುನಿಲ್ ಕುಮಾರ್ ಆಗ್ರಹ..

08 Jul 2026, 10:11 pm KANNADA SAKSHI

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ನಾಯಕ್ ಅವರ ನೇತೃತ್ವದಲ್ಲಿ ತಯಾರಾದ `ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ) ವರದಿಯ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ಪ್ರಕಟ ಮಾಡಬೇಕು ಹಾಗೂ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ.ಸುನಿಲ್‌ ಕುಮಾರ್ (Sunil Kumar) ಅವರು ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ (BJP) ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 450 ಕೋಟಿ ರೂ.ಗೂ ಹೆಚ್ಚು ಜನರ ತೆರಿಗೆ ಹಣವನ್ನು ವೆಚ್ಚ ಮಾಡಿ ನಡೆಸಲಾದ ಸಮೀಕ್ಷೆಯ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ. ಅಧಿವೇಶನದಲ್ಲಿ ಅದಕ್ಕಾಗಿ ಪ್ರತ್ಯೇಕ ಸಮಯ ನಿಗದಿಪಡಿಸಬೇಕು. ವರದಿಯಲ್ಲಿ ಏನಿದೆ ಎಂದು ತಿಳಿಯಲು ನಾವು ಬಯಸಿದ್ದೇವೆ. ಒಬಿಸಿ ಪರವಾಗಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾತನಾಡುತ್ತಾರೆ. ಆದರೆ ರಾಜ್ಯಪಾಲರ ಭಾಷಣದಲ್ಲಿ ಆಯೋಗದ ಕುರಿತು ಪ್ರಸ್ತಾಪವೇ ಇರಲಲ್ಲ. ಹೊರಗಡೆ ಮಾತ್ರ ಅಹಿಂದ, ಒಬಿಸಿ ಎಂದು ಮಾತನಾಡುತ್ತಾರೆ. ಬಜೆಟ್‌ನಲ್ಲಿ ಒಂದು ಸಾಲು ಸೇರಿಸಲಿಲ್ಲ ಎಂದು ದೂರಿದ್ದಾರೆ. ಇದನ್ನೂ ಓದಿ: ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ…!

ಸರ್ಕಾರದ ಬಳಿ ರಾಜ್ಯದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವೇ ಇಲ್ಲದಿದ್ದರೆ, ಬಜೆಟ್ ಕಾರ್ಯಕ್ರಮಗಳನ್ನು ಹೇಗೆ ಮಾಡಲು ಸಾಧ್ಯ? ಸೌಲಭ್ಯಗಳನ್ನು ಹೇಗೆ ಕೊಡಲು ಸಾಧ್ಯ? ಈ ಸರ್ಕಾರ ಯಾವುದನ್ನು ಘೋಷಣೆ ಮಾಡುತ್ತದೆಯೋ ಅದನ್ನು ಪೋಷಣೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿಯಲ್ಲಿ ಮಧುಸೂದನ್ ನಾಯಕ್ ವರದಿಯನ್ನು ಸ್ವೀಕಾರ ಮಾಡಿದರು. ಕಾಂತರಾಜು ವರದಿಯನ್ನು ಹಿಂದಿನ ಸಿಎಂ ತೆಗೆದುಕೊಳ್ಳಲೇ ಇಲ್ಲ. ಅದಾದ ನಂತರ ಜಯಪ್ರಕಾಶ್ ಹೆಗ್ಡೆ ವರದಿಯನ್ನು ಸಂಪುಟದ ಮುಂದೆ ತಂದರೂ ಸಹೋದ್ಯೋಗಿಗಳು ವಿರೋಧ ಮಾಡಿದರು ಎಂದು ಚರ್ಚೆ ಮಾಡಿ, ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಹಿಂದೇಟು ಹಾಕಿದರು. ರಾಹುಲ್ ಗಾಂಧಿ ಸೂಚನೆ ಮೇರೆಗೆ ಹೆಗ್ಡೆ ವರದಿಯನ್ನು ಕಸದ ಬುಟ್ಟಿಗೆ ಹಾಕಿದರು. ಈಗ ಮಧುಸೂದನ್ ನಾಯಕ್ ವರದಿಯನ್ನೂ ಸಹ ಈ ಸರ್ಕಾರ ಕಸದ ಬುಟ್ಟಿಗೆ ಹಾಕಲಿದೆ. ಡಿ.ಕೆ ಶಿವಕುಮಾರ್ (DK Shivakumar) ಅವರ ಸರ್ಕಾರ ನಾಯಕ್ ವರದಿಯನ್ನು ಘನತ್ಯಾಜ್ಯ ವಿಲೇವಾರಿ ಮಾಡಲಿದೆ ಎಂದು ವ್ಯಂಗ್ಯವಾಡಿದ್ದಾರೆ.ಇದನ್ನೂ ಓದಿ: ಬೆಂಗಳೂರು ದಕ್ಷಿಣದಲ್ಲೇ 2ನೇ ಏರ್‌ಪೋರ್ಟ್‌ – ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ಅವರು ಅಹಿಂದ ಬಗ್ಗೆ ಮಾತನಾಡುತ್ತಾರೆ. ಆದರೆ ಹೆಗ್ಡೆ ವರದಿಯನ್ನು ಏಕೆ ವಿರೋಧಿಸುತ್ತಾರೆ? ಮಧುಸೂದನ್ ವರದಿಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏಕೆ ಮಾತನಾಡುತ್ತಿಲ್ಲ? ಕಾಂಗ್ರೆಸ್ ಹುಟ್ಟಿದಾಗಿನಿಂದ ರಾಹುಲ್ ಗಾಂಧಿ ಮತ್ತು ಅವರ ಕುಟುಂಬ ಒಬಿಸಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಒಬಿಸಿಗೆ ನ್ಯಾಯ ಕೊಡಲು ರಚಿಸಿದ ಕಾಕಾ ಕಾಲೇಳ್ಕರ್ ವರದಿಯನ್ನು, ಮಂಡಲ ವರದಿ ಶಿಫಾರಸುಗಳನ್ನು ಕಾಂಗ್ರೆಸ್ ವಿರೋಧಿಸಿದೆ. ಈಗಲಾದರೂ ಮಧುಸೂದನ್ ನಾಯಕ್ ವರದಿ ಬಗ್ಗೆ ಸರ್ಕಾರಕ್ಕೆ ಕಾಳಜಿ ಮತ್ತು ಬದ್ಧತೆ ಇದ್ದರೆ ಚರ್ಚೆಗೆ ಬಿಡಬೇಕು ಎಂದಿದ್ದಾರೆ.

ಈ ವೇಳೆ ಸಂಸದ ಪಿ.ಸಿ. ಮೋಹನ್, ರಾಜ್ಯ ಉಪಾಧ್ಯಕ್ಷರು ಮತ್ತು ಶಾಸಕ ಬಿ.ಎ.ಬಸವರಾಜ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್, ರಾಜ್ಯ ಒಬಿಸಿ ಖಜಾಂಚಿ, ಎ.ಹೆಚ್ ಬಸವರಾಜು ಹಾಜರಿದ್ದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS