ಸುಸ್ಥಿರ ಸಾರಿಗೆಗೆ ಕರ್ನಾಟಕದ ಮಹತ್ವದ ಹೆಜ್ಜೆ: 20 ವರ್ಷಗಳ ದೃಷ್ಟಿಯೊಂದಿಗೆ ಸಮಗ್ರ ಸಂಚಾರ ಯೋಜನೆ

ಕರ್ನಾಟಕದಲ್ಲಿ ಮುಂದಿನ 20 ವರ್ಷಗಳ ಸಾರಿಗೆ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸುಸ್ಥಿರ ನಗರ ಸಾರಿಗೆ ವ್ಯವಸ್ಥೆ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳು ಹಾಗೂ ಪ್ರಮುಖ ನಗರಗಳಿಗಾಗಿ ಸಮಗ್ರ ಸಂಚಾರ ಯೋಜನೆಗಳನ್ನು (CMPs) ವಿವಿಧ ಹಂತಗಳಲ್ಲಿ ಸಿದ್ಧಪಡಿಸಲಾಗುತ್ತಿದ್ದು, ನಗರ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಆಧುನೀಕರಿಸುವ ಗುರಿ ಹೊಂದಲಾಗಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ನಗರ ಭೂಸಾರಿಗೆ ನಿರ್ದೇಶನಾಲಯ (DULT) ಅಧಿಕಾರಿಗಳೊಂದಿಗೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ವಿವಿಧ ನಗರ ಸಾರಿಗೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಭವಿಷ್ಯದ ಅಗತ್ಯಗಳಿಗೆ ತಕ್ಕಂತೆ ಹೊಸ ಯೋಜನೆಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಸುಸ್ಥಿರ ಹಾಗೂ ಪರಿಸರ ಸ್ನೇಹಿ ನಗರ ಸಂಚಾರ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಮುಖ ಯೋಜನೆಗಳ ಅನುಷ್ಠಾನ, ಮುಂದಿನ ಕಾರ್ಯತಂತ್ರ ಹಾಗೂ ಸಮನ್ವಯದ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು. ನಗರಗಳಲ್ಲಿ ಸುಗಮ ಸಂಚಾರ, ಸಂಚಾರ ದಟ್ಟಣೆ ನಿಯಂತ್ರಣ ಮತ್ತು ಸಾರ್ವಜನಿಕ ಸಾರಿಗೆ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿರುವುದಾಗಿ ತಿಳಿಸಲಾಯಿತು.

   SHARE  

Facebook
Twitter
Telegram
WhatsApp

   TOP NEWS  

   RECENT NEWS