ಡಿಪ್ಲೊಮಾ ಸಿಇಟಿ ಫಲಿತಾಂಶ ಪ್ರಕಟ.. ಕೆಇಎ ವೆಬ್‌ಸೈಟ್‌ನಲ್ಲಿ ರ್ಯಾಂಕ್ ಲಭ್ಯ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕೋರ್ಸ್‌ಗಳ ಎರಡನೇ ವರ್ಷ ಅಥವಾ ಮೂರನೇ ಸೆಮಿಸ್ಟರ್‌ಗೆ ನೇರ ಪ್ರವೇಶಕ್ಕಾಗಿ ನಡೆಸಿದ್ದ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (DCET) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ (ಐಎಎಸ್) ಅವರು ಕೆಇಎಯ ಅಧಿಕೃತ ಎಕ್ಸ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ. ಡಿಪ್ಲೊಮಾ ಪೂರ್ಣಗೊಳಿಸಿ ಎಂಜಿನಿಯರಿಂಗ್ ಪದವಿ ಪಡೆಯಲು ಬಯಸಿದ್ದ ಸಾವಿರಾರು ವಿದ್ಯಾರ್ಥಿಗಳು ಈ ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

ಅಭ್ಯರ್ಥಿಗಳ ರ್ಯಾಂಕ್‌ಗಳನ್ನು ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಹಾಗೂ ಮಾರ್ಕ್ಸ್‌ಕಾರ್ಡ್‌ನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶದ ಬಳಿಕ ಶೀಘ್ರದಲ್ಲೇ ಕೌನ್ಸೆಲಿಂಗ್ ಹಾಗೂ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನೂ ಪ್ರಕಟಿಸುವ ನಿರೀಕ್ಷೆಯಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS