ಚಾಮುಂಡಿ ಬೆಟ್ಟದಲ್ಲಿ ಟಿಕೆಟ್ ಹಣ ದುರ್ಬಳಕೆ ಆರೋಪ.. ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಗಂಭೀರ ಆರೋಪ

ಮೈಸೂರು: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ವಿಶೇಷ ದರ್ಶನ ಟಿಕೆಟ್ ಹಣದ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

2025ರ ಆಷಾಢ ಮಾಸದಲ್ಲಿ ಭಕ್ತರಿಗೆ ನೀಡಲಾಗಿದ್ದ ವಿಶೇಷ ದರ್ಶನ ಟಿಕೆಟ್‌ಗಳಿಂದ ಸಂಗ್ರಹವಾದ ಹಣದಲ್ಲಿ ಭಾರಿ ಪ್ರಮಾಣದ ಗೋಲ್‌ಮಾಲ್ ನಡೆದಿದೆ ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಸಮಾಜ ಸೇವಕ ಅರವಿಂದ್ ಶರ್ಮಾ ಆರೋಪಿಸಿದ್ದಾರೆ. ಈ ಸಂಬಂಧ ದಾಖಲೆಗಳ ಸಮೇತ ಗಂಭೀರ ಆರೋಪಗಳನ್ನು ಅವರು ಮುಂದಿಟ್ಟಿದ್ದಾರೆ.

ಈ ಆರೋಪಗಳು ದೇವಾಲಯ ಆಡಳಿತದ ಪಾರದರ್ಶಕತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದ್ದು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕೆಂದು ಆಗ್ರಹ ಕೇಳಿಬರುತ್ತಿದೆ. ಪ್ರಾಧಿಕಾರದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬೀಳಬೇಕಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS