ಹಾಲಿವುಡ್ನ ಜನಪ್ರಿಯ ಸೂಪರ್ಹೀರೋ ಸರಣಿಗಳಲ್ಲೊಂದು ‘Spider-Man’ ಮತ್ತೆ ಭಾರತೀಯ ಸಿನಿಪ್ರಿಯರನ್ನು ರಂಜಿಸಲು ಸಜ್ಜಾಗಿದೆ. ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಲಿರುವ ‘Spider-Man: Brand New Day’ ಚಿತ್ರದ ಮೇಲೆ ಭಾರೀ ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಯಕ್ಕೂ ಮುನ್ನವೇ ಅಡ್ವಾನ್ಸ್ ಬುಕ್ಕಿಂಗ್ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಭಾರತದಲ್ಲಿ ಹಾಲಿವುಡ್ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆ ಇದ್ದು, ಅದರಲ್ಲೂ ಸ್ಪೈಡರ್ಮ್ಯಾನ್ ಸರಣಿಗೆ ವಿಶೇಷ ಅಭಿಮಾನಿ ಬಳಗವಿದೆ. ಇದೇ ಕಾರಣದಿಂದ ಸಿನಿಮಾ ಬಿಡುಗಡೆಯಾಗಲು ಇನ್ನೂ 8 ದಿನಗಳು ಬಾಕಿ ಇರುವಾಗಲೇ ದೇಶದ ವಿವಿಧ ಮಲ್ಟಿಪ್ಲೆಕ್ಸ್ಗಳಲ್ಲಿ ಸುಮಾರು 1.55 ಲಕ್ಷಕ್ಕೂ ಹೆಚ್ಚು ಟಿಕೆಟ್ಗಳು ಮಾರಾಟವಾಗಿವೆ ಎಂದು ವರದಿಯಾಗಿದೆ.
ಈ ಹಿಂದೆ ಬಿಡುಗಡೆಯಾದ ‘Spider-Man: No Way Home’ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಅಡ್ವಾನ್ಸ್ ಟಿಕೆಟ್ಗಳು ಮಾರಾಟವಾಗಿ ದಾಖಲೆ ನಿರ್ಮಿಸಿತ್ತು. ಇದೀಗ ‘Spider-Man: Brand New Day’ ಕೂಡ ಆ ದಾಖಲೆಯತ್ತ ವೇಗವಾಗಿ ಸಾಗುತ್ತಿದ್ದು, ಬಿಡುಗಡೆಯ ಬಳಿಕ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಆರಂಭ ಪಡೆಯುವ ನಿರೀಕ್ಷೆ ವ್ಯಕ್ತವಾಗಿದೆ.










