ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ಜನ ನಾಯಗನ್ ಅದ್ಧೂರಿಯಾಗಿ ತೆರೆ ಕಂಡಿದೆ. ಇತ್ತೀಚೆಗಷ್ಟೇ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ವಿಜಯ್ ಅವರ ಈ ಚಿತ್ರ ಬಿಡುಗಡೆಗೂ ಮುನ್ನವೇ ಆನ್ಲೈನ್ ಟಿಕೆಟ್ ಬುಕಿಂಗ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.
ಪ್ರಮುಖ ಆನ್ಲೈನ್ ಟಿಕೆಟ್ ಬುಕಿಂಗ್ ವೇದಿಕೆಯಲ್ಲಿ ಮೊದಲ ಶೋ ಆರಂಭವಾಗುವ ಮುನ್ನವೇ 10 ಲಕ್ಷಕ್ಕೂ (1 ಮಿಲಿಯನ್) ಹೆಚ್ಚು ಮುಂಗಡ ಟಿಕೆಟ್ಗಳು ಮಾರಾಟವಾಗಿದ್ದು, ಭಾರತೀಯ ಚಿತ್ರರಂಗದಲ್ಲಿ ಹೊಸ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಈ ಸಾಧನೆಯ ಮೂಲಕ ‘ಜನ ನಾಯಗನ್’ ಸಿನಿಮಾ ಬಿಡುಗಡೆಯ ಮುನ್ನವೇ ಭಾರೀ ಸಂಚಲನ ಸೃಷ್ಟಿಸಿದೆ.
ವಿಜಯ್ ಅವರ ಅಪಾರ ಅಭಿಮಾನಿ ಬಳಗ ಹಾಗೂ ಚಿತ್ರದ ಮೇಲಿನ ನಿರೀಕ್ಷೆಯೇ ಈ ದಾಖಲೆಮಟ್ಟದ ಟಿಕೆಟ್ ಮಾರಾಟಕ್ಕೆ ಪ್ರಮುಖ ಕಾರಣವಾಗಿದೆ ಎಂದು ಸಿನಿ ವಲಯ ವಿಶ್ಲೇಷಿಸುತ್ತಿದೆ. ಬಿಡುಗಡೆಯ ದಿನವೇ ಚಿತ್ರಮಂದಿರಗಳ ಮುಂದೆ ಅಭಿಮಾನಿಗಳ ಸಂಭ್ರಮ, ಕೇಕೆ ಮತ್ತು ವಿಜಯೋತ್ಸವದ ವಾತಾವರಣ ಕಂಡುಬಂದಿದೆ.










