ಬೆಂಗಳೂರು ಆಸ್ತಿದಾರರಿಗೆ ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ: ನಿವೇಶನ ವಾಪಸ್, ದುಪ್ಪಟ್ಟು ತೆರಿಗೆ..!

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬೆಂಗಳೂರು ಆಸ್ತಿದಾರರಿಗೆ ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ: ನಿವೇಶನ ವಾಪಸ್, ದುಪ್ಪಟ್ಟು ತೆರಿಗೆ..!

01 Aug 2026, 9:37 pm KANNADA SAKSHI

ಬೆಂಗಳೂರಿನ ಆಸ್ತಿದಾರರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದ ಒಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಬೇಕಾಗುತ್ತದೆ. ಒಂದೊಮ್ಮೆ ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ ಬಳಿ "ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಮನೆ ಕಟ್ಟದಿದ್ದರೆ ನಿವೇಶನ ವಾಪಸ್ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದಾರೆ. ಬೇರೆ ವಿಧಿಯಿಲ್ಲ, ನಾವು ಇದನ್ನು ಮಾಡಲೇಬೇಕಾಗುತ್ತದೆ.

ನಾವು ನಿವೇಶನ ನೀಡುವುದು ಮನೆ ಕಟ್ಟಿಕೊಳ್ಳಲು. ಕೆಲವರು 20, 30, 40 ವರ್ಷವಾದರೂ ಮನೆ ಕಟ್ಟಿಲ್ಲ. ಅವರು ಕಟ್ಟಿರುವ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡಿ ನಿವೇಶನ ಹಿಂಪಡೆದುಕೊಳ್ಳಲಿದ್ದೇವೆ. ಸಿಐಟಿಬಿ, ಬಿಡಿಎ, ಸೊಸೈಟಿಗಳಿಂದ ನಿವೇಶನ ಪಡೆದ ಮೇಲೆ ಮನೆ ಕಟ್ಟಬೇಕಾಗಿರುವುದು ಅವರ ಕರ್ತವ್ಯ. ನಿವೇಶನಕ್ಕೆ ಕಾಪೌಂಡ್ ಕೂಡ ಹಾಕದೇ, ಕಸ ಹಾಕಲು ಅವಕಾಶ ಕೊಟ್ಟರೆ ಹೇಗೆ, ಅವರ ಜಾಗದಲ್ಲಿ ಅವರು ಕಸ ಹಾಕದೇ ಇದ್ದರೂ, ಅವರ ಜಾಗವನ್ನು ಅವರು ರಕ್ಷಣೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರು ಸ್ವಚ್ಛತೆಯೇ ದೇವರು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನಿಮ್ಮ ಮನೆ ಮುಂದೆ ಸ್ನಚ್ಛತೆ ಕಾಪಾಡಿದರೆ, ಬೀದಿ ಸ್ವಚ್ಛವಾಗುತ್ತದೆ. ಬೀದಿ ಸ್ವಚ್ಛವಾದರೆ ಊರು ಸ್ವಚ್ಛವಾಗುತ್ತದೆ. ಊರು ಸ್ವಚ್ಛವಾದರೆ ನಾಡು ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಸ್ವಚ್ಛತೆ ನಮ್ಮ ಕರ್ತವ್ಯ. ನಿಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ ಎಂದೂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ. ಇದನ್ನು ಕಾಪಾಡಲು ಅಭಿಯಾನ ಆರಂಭಿಸಿದ್ದೇವೆ.

Generating image…

ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ ಬಳಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಮನೆ ಕಟ್ಟದಿದ್ದರೆ ನಿವೇಶನ ವಾಪಸ್ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದಾರೆ. ಬೇರೆ ವಿಧಿಯಿಲ್ಲ, ನಾವು ಇದನ್ನು ಮಾಡಲೇಬೇಕಾಗುತ್ತದೆ.

ನಾವು ನಿವೇಶನ ನೀಡುವುದು ಮನೆ ಕಟ್ಟಿಕೊಳ್ಳಲು. ಕೆಲವರು 20, 30, 40 ವರ್ಷವಾದರೂ ಮನೆ ಕಟ್ಟಿಲ್ಲ. ಅವರು ಕಟ್ಟಿರುವ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡಿ ನಿವೇಶನ ಹಿಂಪಡೆದುಕೊಳ್ಳಲಿದ್ದೇವೆ. ಸಿಐಟಿಬಿ, ಬಿಡಿಎ, ಸೊಸೈಟಿಗಳಿಂದ ನಿವೇಶನ ಪಡೆದ ಮೇಲೆ ಮನೆ ಕಟ್ಟಬೇಕಾಗಿರುವುದು ಅವರ ಕರ್ತವ್ಯ. ನಿವೇಶನಕ್ಕೆ ಕಾಪೌಂಡ್ ಕೂಡ ಹಾಕದೇ, ಕಸ ಹಾಕಲು ಅವಕಾಶ ಕೊಟ್ಟರೆ ಹೇಗೆ, ಅವರ ಜಾಗದಲ್ಲಿ ಅವರು ಕಸ ಹಾಕದೇ ಇದ್ದರೂ, ಅವರ ಜಾಗವನ್ನು ಅವರು ರಕ್ಷಣೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರು ಸ್ವಚ್ಛತೆಯೇ ದೇವರು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನಿಮ್ಮ ಮನೆ ಮುಂದೆ ಸ್ನಚ್ಛತೆ ಕಾಪಾಡಿದರೆ, ಬೀದಿ ಸ್ವಚ್ಛವಾಗುತ್ತದೆ. ಬೀದಿ ಸ್ವಚ್ಛವಾದರೆ ಊರು ಸ್ವಚ್ಛವಾಗುತ್ತದೆ. ಊರು ಸ್ವಚ್ಛವಾದರೆ ನಾಡು ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಸ್ವಚ್ಛತೆ ನಮ್ಮ ಕರ್ತವ್ಯ. ನಿಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ ಎಂದೂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ. ಇದನ್ನು ಕಾಪಾಡಲು ಅಭಿಯಾನ ಆರಂಭಿಸಿದ್ದೇವೆ.

Editor Reporter
kannadasakshi.in

ಬೆಂಗಳೂರು ಆಸ್ತಿದಾರರಿಗೆ ಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ: ನಿವೇಶನ ವಾಪಸ್, ದುಪ್ಪಟ್ಟು ತೆರಿಗೆ..!

ಬೆಂಗಳೂರಿನ ಆಸ್ತಿದಾರರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದ ಒಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಬೇಕಾಗುತ್ತದೆ. ಒಂದೊಮ್ಮೆ ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ ಬಳಿ "ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಮನೆ ಕಟ್ಟದಿದ್ದರೆ ನಿವೇಶನ ವಾಪಸ್ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದಾರೆ. ಬೇರೆ ವಿಧಿಯಿಲ್ಲ, ನಾವು ಇದನ್ನು ಮಾಡಲೇಬೇಕಾಗುತ್ತದೆ.

ನಾವು ನಿವೇಶನ ನೀಡುವುದು ಮನೆ ಕಟ್ಟಿಕೊಳ್ಳಲು. ಕೆಲವರು 20, 30, 40 ವರ್ಷವಾದರೂ ಮನೆ ಕಟ್ಟಿಲ್ಲ. ಅವರು ಕಟ್ಟಿರುವ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡಿ ನಿವೇಶನ ಹಿಂಪಡೆದುಕೊಳ್ಳಲಿದ್ದೇವೆ. ಸಿಐಟಿಬಿ, ಬಿಡಿಎ, ಸೊಸೈಟಿಗಳಿಂದ ನಿವೇಶನ ಪಡೆದ ಮೇಲೆ ಮನೆ ಕಟ್ಟಬೇಕಾಗಿರುವುದು ಅವರ ಕರ್ತವ್ಯ. ನಿವೇಶನಕ್ಕೆ ಕಾಪೌಂಡ್ ಕೂಡ ಹಾಕದೇ, ಕಸ ಹಾಕಲು ಅವಕಾಶ ಕೊಟ್ಟರೆ ಹೇಗೆ, ಅವರ ಜಾಗದಲ್ಲಿ ಅವರು ಕಸ ಹಾಕದೇ ಇದ್ದರೂ, ಅವರ ಜಾಗವನ್ನು ಅವರು ರಕ್ಷಣೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರು ಸ್ವಚ್ಛತೆಯೇ ದೇವರು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನಿಮ್ಮ ಮನೆ ಮುಂದೆ ಸ್ನಚ್ಛತೆ ಕಾಪಾಡಿದರೆ, ಬೀದಿ ಸ್ವಚ್ಛವಾಗುತ್ತದೆ. ಬೀದಿ ಸ್ವಚ್ಛವಾದರೆ ಊರು ಸ್ವಚ್ಛವಾಗುತ್ತದೆ. ಊರು ಸ್ವಚ್ಛವಾದರೆ ನಾಡು ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಸ್ವಚ್ಛತೆ ನಮ್ಮ ಕರ್ತವ್ಯ. ನಿಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ ಎಂದೂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ. ಇದನ್ನು ಕಾಪಾಡಲು ಅಭಿಯಾನ ಆರಂಭಿಸಿದ್ದೇವೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS