ಬ್ರಿಜ್ ಭೂಷಣ್ ಸಿಂಗ್ ಖುಲಾಸೆ: ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬ್ರಿಜ್ ಭೂಷಣ್ ಸಿಂಗ್ ಖುಲಾಸೆ: ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

03 Aug 2026, 10:40 pm KANNADA SAKSHI

ನವದೆಹಲಿ, ಆಗಸ್ಟ್ 3: ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. ತೀರ್ಪಿನ ಬೆನ್ನಲ್ಲೇ ಪ್ರಕರಣದಲ್ಲಿ ದೂರು ನೀಡಿದ್ದ ಮಹಿಳಾ ಕುಸ್ತಿಪಟುಗಳು ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಕೂಡ ತೀರ್ಪಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಆರಂಭದಿಂದಲೂ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ರಕ್ಷಿಸಲು ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಕೆಲಸ ಮಾಡುತ್ತಿದೆ ಎಂದು ವಿನೇಶ್ ಫೋಗಟ್ ಗಂಭೀರ ಆರೋಪ ಮಾಡಿದ್ದಾರೆ. ಆರು ಮಹಿಳಾ ಕುಸ್ತಿಪಟುಗಳು ನೀಡಿದ್ದ ಲೈಂಗಿಕ ಕಿರುಕುಳದ ದೂರಿನ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಬ್ರಿಜ್ ಭೂಷಣ್ ಸಿಂಗ್ ಮತ್ತು ಡಬ್ಲ್ಯೂಎಫ್‌ಐ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ವಿರುದ್ಧದ ಆರೋಪಗಳನ್ನು ನ್ಯಾಯಾಲಯ ಪರಿಗಣಿಸಿತ್ತು.

ಹೆಚ್ಚುವರಿ ಮುಖ್ಯ ಜುಡಿಶಿಯಲ್ ಮೆಜಿಸ್ಟ್ರೇಟ್ ಅಶ್ವಿನಿ ಪನ್ವಾರ್ ಅವರ ನ್ಯಾಯಪೀಠವು ಸೋಮವಾರ ಇಬ್ಬರನ್ನೂ ಆರೋಪಮುಕ್ತಗೊಳಿಸಿ ತೀರ್ಪು ನೀಡಿದೆ. ಆದರೆ ಈ ತೀರ್ಪನ್ನು ಮಹಿಳಾ ಕುಸ್ತಿಪಟುಗಳು ಒಪ್ಪಿಕೊಳ್ಳದಿದ್ದು, ಮೇಲ್ಮನವಿ ಮೂಲಕ ಮುಂದುವರಿಯಲು ನಿರ್ಧರಿಸಿದ್ದಾರೆ. ಪ್ರಕರಣದ ಮುಂದಿನ ಕಾನೂನು ಕ್ರಮಗಳತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS