‘ಮೈಸಾ’ ಸಿನಿಮಾ ಚಿತ್ರೀಕರಣದ ವೇಳೆ ಸೊಂಟದ ಸ್ನಾಯುವಿಗೆ ಬಲವಾದ ಏಟಾದ ಹಿನ್ನೆಲೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಆರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಸದ್ಯ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು, ತಮ್ಮ ಆರೋಗ್ಯದ ಸ್ಥಿತಿಗತಿ ಕುರಿತು ಇದೀಗ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ ಸುದೀರ್ಘ ಬರಹದ ಪೋಸ್ಟ್ ಹಂಚಿಕೊಂಡಿರುವ ರಶ್ಮಿಕಾ, ತಮ್ಮ ಚೇತರಿಕೆಯ ಕುರಿತು ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಹಿಂದೆ ಕೂಡ ಹಲವು ಬಾರಿ ಗಾಯಗೊಂಡಿದ್ದನ್ನು ನೆನಪಿಸಿಕೊಂಡಿರುವ ಅವರು, ಸತತವಾಗಿ ಗಾಯಗಳಿಗೆ ಒಳಗಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ಚೇತರಿಕೆ ಹಂತದಲ್ಲಿರುವ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ.
ರಶ್ಮಿಕಾ ಅವರ ಆರೋಗ್ಯದ ವಿಚಾರ ತಿಳಿದು ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವ ಅವರು ಸಂಪೂರ್ಣ ಚೇತರಿಸಿಕೊಂಡ ಬಳಿಕ ಮತ್ತೆ ಚಿತ್ರೀಕರಣಕ್ಕೆ ಮರಳುವ ನಿರೀಕ್ಷೆಯಿದೆ.










