ಬೆಂಗಳೂರಿನಲ್ಲಿ ಮೊದಲ ಬಾರಿಗೆ ‘ಫ್ರೀಡಂ ಹಬ್ಬ’: ಆ.15ರಂದು ದಿನವಿಡೀ ಅದ್ಧೂರಿ ಸಂಭ್ರಮ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬೆಂಗಳೂರಿನಲ್ಲಿ ಮೊದಲ ಬಾರಿಗೆ ‘ಫ್ರೀಡಂ ಹಬ್ಬ’: ಆ.15ರಂದು ದಿನವಿಡೀ ಅದ್ಧೂರಿ ಸಂಭ್ರಮ

05 Aug 2026, 11:16 pm KANNADA SAKSHI

ಬೆಂಗಳೂರು: ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಈ ಬಾರಿ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ನಡೆದಿದೆ. ಎಲ್ಲ ಭಾಷೆ ಹಾಗೂ ಸಮುದಾಯಗಳ ಜನರನ್ನು ಒಂದೆಡೆ ಸೇರಿಸಿ ಆಚರಿಸುವ ಉದ್ದೇಶದಿಂದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ‘ಫ್ರೀಡಂ ಹಬ್ಬ’ ಘೋಷಿಸಿದ್ದಾರೆ.

ಆಗಸ್ಟ್‌ 15ರಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬೆಂಗಳೂರಿನಲ್ಲಿ ನೆಲೆಸಿರುವ ವಿವಿಧ ಸಮುದಾಯಗಳ ಜನರು ಒಂದೆಡೆ ಸೇರಿ ಸ್ವಾತಂತ್ರ್ಯದ ಸಂಭ್ರಮವನ್ನು ಹಂಚಿಕೊಳ್ಳಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ದಿನವಿಡೀ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರದ ಔಪಚಾರಿಕ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ವೈವಿಧ್ಯತೆ ಹಾಗೂ ಸಂಸ್ಕೃತಿಯ ಸಾರ್ವಜನಿಕ ಸಂಭ್ರಮಾಚರಣೆಯಾಗಿ ರೂಪಿಸುವುದು ‘ಫ್ರೀಡಂ ಹಬ್ಬ’ದ ಉದ್ದೇಶವಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ವೈವಿಧ್ಯಮಯ ಸಂಸ್ಕೃತಿಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಮೂಲಕ ಈ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿಸಲು ಸರ್ಕಾರ ಮುಂದಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS