ನವದೆಹಲಿ: “ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್-ಝಿ ಯುವಕರಿಗೆ ಕರೆ ನೀಡಿದ್ದಾರೆ.
ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT)ಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮೋದಿ, ಯುವಜನರ ಸಾಮರ್ಥ್ಯ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ಅವರ ಪಾತ್ರವನ್ನು ಒತ್ತಿ ಹೇಳಿದರು. ವಿಶೇಷವಾಗಿ ಜೆನ್-ಝಿ ಯುವಕರನ್ನು ಉದ್ದೇಶಿಸಿ ಅವರು ತಮ್ಮ ಸಂದೇಶವನ್ನು ಹಂಚಿಕೊಂಡರು.
ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ಬಳಿಕ ಜೆನ್-ಝಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ನೀಡಿದ ಮೊದಲ ಭಾಷಣ ಇದಾಗಿದೆ ಎಂದು ವರದಿಯಾಗಿದೆ. ಯುವಕರು ತಮ್ಮ ಪ್ರತಿಭೆ, ನವೀನ ಆಲೋಚನೆಗಳು ಮತ್ತು ತಂತ್ರಜ್ಞಾನ ಜ್ಞಾನವನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ.










