KPSC ನೇಮಕಾತಿ ಅಕ್ರಮ: ಅಭ್ಯರ್ಥಿಗಳ ಗೌಪ್ಯ ಮಾಹಿತಿ ಸೋರಿಕೆ ಆರೋಪ; ಇಬ್ಬರು ಸಿಬ್ಬಂದಿ ಬಂಧನ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

KPSC ನೇಮಕಾತಿ ಅಕ್ರಮ: ಅಭ್ಯರ್ಥಿಗಳ ಗೌಪ್ಯ ಮಾಹಿತಿ ಸೋರಿಕೆ ಆರೋಪ; ಇಬ್ಬರು ಸಿಬ್ಬಂದಿ ಬಂಧನ

08 Aug 2026, 5:52 pm KANNADA SAKSHI

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವ ಆರೋಪಗಳ ಸಾಲಿಗೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಜಲಸಂಪನ್ಮೂಲ ಇಲಾಖೆಯ ಕಿರಿಯ ಎಂಜಿನಿಯರ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಹರಾಗಿದ್ದ ಅಭ್ಯರ್ಥಿಗಳ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ KPSCಯ ಇಬ್ಬರು ಸಿಬ್ಬಂದಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ಕಿರಿಯ ಎಂಜಿನಿಯರ್ ಹುದ್ದೆಗಳ ನೇಮಕಾತಿಯ 1:3 ಅನುಪಾತದ ಅರ್ಹತಾ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆ ಸೇರಿದಂತೆ ವೈಯಕ್ತಿಕ ವಿವರಗಳನ್ನು ಆಯೋಗದ ಸಿಬ್ಬಂದಿಯೇ ಮಧ್ಯವರ್ತಿಗಳಿಗೆ ರಹಸ್ಯವಾಗಿ ರವಾನಿಸಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಅಭ್ಯರ್ಥಿಗಳ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ KPSC ತಾಂತ್ರಿಕ ಸಹಾಯಕ ಶರಣಪ್ಪ ಅಡವಳ್ಳಿ ಮತ್ತು ಹಿರಿಯ ಸಹಾಯಕ ಸ್ವಾಮಿದಾಸ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಗೌಪ್ಯವಾಗಿರಬೇಕಾದ ಅಭ್ಯರ್ಥಿಗಳ ಮಾಹಿತಿಯೇ ಸೋರಿಕೆಯಾಗಿರುವುದು ಉದ್ಯೋಗಾಕಾಂಕ್ಷಿಗಳಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS