ಕೆಂಪುಕೋಟೆ ಕಾರು ಸ್ಫೋಟ ಪ್ರಕರಣ: 14 ಆರೋಪಿಗಳ ವಿರುದ್ಧದ ಚಾರ್ಜ್‌ಶೀಟ್‌ಗೆ ಕೋರ್ಟ್ ಅಸ್ತು

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕೆಂಪುಕೋಟೆ ಕಾರು ಸ್ಫೋಟ ಪ್ರಕರಣ: 14 ಆರೋಪಿಗಳ ವಿರುದ್ಧದ ಚಾರ್ಜ್‌ಶೀಟ್‌ಗೆ ಕೋರ್ಟ್ ಅಸ್ತು

29 Aug 2026, 8:05 pm KANNADA SAKSHI

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಸಮೀಪ 2025ರ ನವೆಂಬರ್‌ನಲ್ಲಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸಲ್ಲಿಸಿರುವ ಆರೋಪಪಟ್ಟಿಯನ್ನು ದೆಹಲಿಯ ವಿಶೇಷ ಎನ್‌ಐಎ ನ್ಯಾಯಾಲಯ ಶನಿವಾರ ಪರಿಗಣನೆಗೆ ತೆಗೆದುಕೊಂಡಿದೆ.

ಈ ಪ್ರಕರಣದಲ್ಲಿ ಎನ್‌ಐಎ ಮೊದಲ ಹಂತದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದು, ಬಳಿಕ ಪೂರಕ ಆರೋಪಪಟ್ಟಿಯನ್ನೂ ಸಲ್ಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 14 ಆರೋಪಿಗಳ ವಿರುದ್ಧದ ಆರೋಪಪಟ್ಟಿಯನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಸ್ಫೋಟದ ಪ್ರಮುಖ ಆರೋಪಿ ಎಂದು ಉಲ್ಲೇಖಿಸಲಾದ ಉಮರ್ ಉನ್ ನಬಿ ಸ್ಫೋಟದಲ್ಲೇ ಮೃತಪಟ್ಟಿದ್ದಾನೆ.

ಸುಮಾರು 7,500 ಪುಟಗಳ ಆರೋಪಪಟ್ಟಿಯಲ್ಲಿ ನೂರಾರು ಸಾಕ್ಷಿಗಳು ಹಾಗೂ ಹಲವು ದಾಖಲೆಗಳನ್ನು ಉಲ್ಲೇಖಿಸಲಾಗಿದೆ. 2025ರ ನವೆಂಬರ್ 10ರಂದು ನಡೆದ ಈ ಸ್ಫೋಟದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ನಿಗದಿಪಡಿಸಲಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS