ಹಾರ್ಮುಜ್ ಜಲಸಂಧಿಯಲ್ಲಿ ಐದು ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆದ ಬಳಿಕ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅಮೆರಿಕದ ಜಲಾಂತರ್ಗಾಮಿ ನೌಕೆಯನ್ನು ಇರಾನ್ ವಶಪಡಿಸಿಕೊಂಡಿದೆ ಎಂಬ ವರದಿ ಇದೀಗ ಭಾರೀ ಸಂಚಲನ ಮೂಡಿಸಿದೆ.
ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಇಂತಹ ಬೆಳವಣಿಗೆ ನಡೆದಿರುವುದು ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಯಾವುದೇ ರೀತಿಯ ಸಂಘರ್ಷ ಉಲ್ಬಣಗೊಂಡರೆ ತೈಲ ಪೂರೈಕೆ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಜಾಗತಿಕ ರಾಷ್ಟ್ರಗಳು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ತೈಲ ಸಾಗಣೆ ಹಾಗೂ ಸಮುದ್ರ ಮಾರ್ಗಗಳ ಭದ್ರತೆಯ ಕುರಿತು ಹೊಸ ಆತಂಕಗಳು ಎದುರಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಯಾವ ತಿರುವು ಪಡೆಯಲಿದೆ ಎಂಬ ಕುತೂಹಲ ಮೂಡಿದೆ.










