ಕನ್ನಡ ಚಿತ್ರರಂಗದ ಹಿರಿಯ ನಟಿ ಮಾಲಾಶ್ರೀ ಹಾಗೂ ಬಹುಬೇಡಿಕೆಯ ನಟಿ ರುಕ್ಮಿಣಿ ವಸಂತ್ ಮೊದಲ ಬಾರಿಗೆ ಒಂದೇ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ. ಎರಡು ತಲೆಮಾರಿನ ಖ್ಯಾತ ನಟಿಯರನ್ನು ಒಂದೇ ಫ್ರೇಮ್‌ನಲ್ಲಿ ತರುತ್ತಿರುವ ‘ಮಂಗಳ ಗೌರಿ’ ಚಿತ್ರದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗುತ್ತಿದೆ.
ರಾಹುಲ್ ಪಿಕೆ ನಿರ್ದೇಶನದ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ದಾಕ್ಷಾಯಣಿ ಟಾಕೀಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿವೆ. ಕಂಟೆಂಟ್ ಆಧಾರಿತ ಹಾಗೂ ಅದ್ಧೂರಿ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಈ ಎರಡು ಸಂಸ್ಥೆಗಳ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದೆ.
ಮಾಲಾಶ್ರೀ ಹಾಗೂ ರುಕ್ಮಿಣಿ ವಸಂತ್ ಅವರ ವಿಭಿನ್ನ ಅಭಿನಯ ಶೈಲಿಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರದ ಕಥೆ, ತಾರಾಗಣ ಹಾಗೂ ಇತರ ವಿವರಗಳ ಕುರಿತು ಚಿತ್ರತಂಡ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ.










