ಗುರುಗ್ರಾಮ್‌ನಲ್ಲಿ ಮಹಿಳಾ ಬೈಕರ್‌ಗೆ ಕಾರಿನಿಂದ ಡಿಕ್ಕಿ ಹೊಡೆದ ಪ್ರಕರಣದ ಆರೋಪಿ ಕಲ್ಯಾಣ್ ಬೈನ್ಸ್ಲಾ, ತಾನು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿಲ್ಲ ಎಂದು ಹೇಳಿದ್ದಾನೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಬೈಕರ್ ಎಂಬುದು ತನಗೆ ತಿಳಿದಿರಲಿಲ್ಲ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 13ರ ಬೆಳಗ್ಗೆ ಸೋದರಸಂಬಂಧಿಯೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಬೈನ್ಸ್ಲಾ ಹೇಳಿದ್ದಾರೆ. ಕಾರನ್ನು ಉದ್ದೇಶಪೂರ್ವಕವಾಗಿ ಬೈಕ್‌ಗೆ ಡಿಕ್ಕಿ ಹೊಡೆಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಘಟನೆಯ ಸಂಪೂರ್ಣ ವಿವರ ತನಿಖೆಯಿಂದ ಹೊರಬರಬೇಕಿದೆ.









