ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಚುರುಕುಗೊಂಡಿದೆ. ಇದರ ನಡುವೆ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ.
ಬೆಂಗಳೂರಿನ ಪ್ರಮುಖ ನೀರಿನ ಮೂಲವಾಗಿರುವ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗುತ್ತಿದೆ. ಭರ್ತಿಯಾಗಿದ್ದ ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಇಳಿಮುಖವಾಗಿದ್ದರೆ, ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದೆ. ಸೆಪ್ಟೆಂಬರ್‌ನಲ್ಲಿ ಮಳೆಯ ಪ್ರಮಾಣದ ಏರಿಳಿತದಿಂದ ಜಲಾಶಯಗಳ ನೀರಿನ ಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ.
ಇಂದು ಸೆಪ್ಟೆಂಬರ್ 16ರಂದು ಕೆಆರ್‌ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಮಾಹಿತಿಯತ್ತ ಎಲ್ಲರ ಗಮನ ನೆಟ್ಟಿದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೆ ಜಲಾಶಯಗಳ ನೀರಿನ ಸಂಗ್ರಹದ ಮೇಲೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.









