ರಷ್ಯಾ ತೈಲ ಖರೀದಿ: ಅಮೆರಿಕಕ್ಕೆ ಭಾರತದ ಸ್ಪಷ್ಟನೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ರಷ್ಯಾ ತೈಲ ಖರೀದಿ: ಅಮೆರಿಕಕ್ಕೆ ಭಾರತದ ಸ್ಪಷ್ಟನೆ

17 Sep 2026, 3:42 pm KANNADA SAKSHI

ತಮ್ಮ ವಾಣಿಜ್ಯ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದ ಭಾರತ ರಷ್ಯಾದಿಂದ ತೈಲ ಖರೀದಿಸುತ್ತಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ರಷ್ಯಾದಿಂದ ಇಂಧನ ಖರೀದಿಸುವ ದೇಶಗಳ ಮೇಲೆ ಶೇ.100ರಷ್ಟು ಆಮದು ಸುಂಕ ವಿಧಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರ ನೀಡುವ ಮಸೂದೆಯನ್ನು ಅಮೆರಿಕ ಸಂಸತ್ತು ಅಂಗೀಕರಿಸಿದ ಬಳಿಕ ಭಾರತದ ಈ ಹೇಳಿಕೆ ಬಂದಿದೆ.

ದೇಶದ 140 ಕೋಟಿ ಜನರ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಸಂಪೂರ್ಣ ಬದ್ಧವಾಗಿದೆ ಎಂದು ಸರ್ಕಾರ ಪುನರುಚ್ಚರಿಸಿದೆ. ಜಾಗತಿಕ ಬೆಳವಣಿಗೆಗಳ ನಡುವೆಯೂ ತನ್ನ ವಾಣಿಜ್ಯ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಇಂಧನ ಖರೀದಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.

ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಅಮೆರಿಕ ಕಾಂಗ್ರೆಸ್ ಅಂಗೀಕರಿಸಿರುವ ‘ರಷ್ಯಾ ಮತ್ತು ಇರಾನ್ ನಿರ್ಬಂಧಗಳ ಕಾಯ್ದೆ-2026’ರ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದೆ. ಮುಂದಿನ ಬೆಳವಣಿಗೆಗಳ ಮೇಲೂ ನಿಗಾ ಇರಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS