ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ, ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ (Mangaluru) ಶುಕ್ರವಾರ (ಸೆ.18) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ, ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಇದರಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಯಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು








