ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (RPC ಮತ್ತು KK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಡ್ಯ ಪರೀಕ್ಷೆ (PST) ಹಾಗೂ ಸಹಿಷ್ಣುತಾ ಪರೀಕ್ಷೆ (ET) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯ್ಕೆಯಾಗಿರುವ 19,396 ಅರ್ಹ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗಳಲ್ಲಿ ಭಾಗವಹಿಸಲಿದ್ದಾರೆ.
ಅಭ್ಯರ್ಥಿಗಳು ನಿಗದಿತ ದಿನಾಂಕ ಮತ್ತು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಬೇಕಿದ್ದು, ನೇಮಕಾತಿ ವಿಭಾಗದ ಅಧಿಕೃತ ಸೂಚನೆಗಳನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ. PST ಮತ್ತು ET ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಹಾಗೂ ಸಹಿಷ್ಣುತೆಯನ್ನು ಪರೀಕ್ಷಿಸಲಾಗುತ್ತದೆ.










