ಮಡಿಕೇರಿಯ ಹಲವು ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ – ಸ್ವಚ್ಛತೆ ಇಲ್ಲದ ಹೋಟೆಲ್‌ಗಳಿಗೆ ನೋಟಿಸ್‌..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮಡಿಕೇರಿಯ ಹಲವು ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ – ಸ್ವಚ್ಛತೆ ಇಲ್ಲದ ಹೋಟೆಲ್‌ಗಳಿಗೆ ನೋಟಿಸ್‌..

26 Sep 2026, 8:23 pm KANNADA SAKSHI

ಇಲ್ಲಿನ (Madikeri) ಹಲವು ಹೋಟೆಲ್‌ಗಳಲ್ಲಿ (Hotel) ಸ್ವಚ್ಛತೆ ಮತ್ತು ಆಹಾರ ಸುರಕ್ಷತೆ ನಿಯಮಗಳ ಉಲ್ಲಂಘನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸ್ವಚ್ಛತೆ ಕೊರತೆ ಕಂಡು ಬಂದ ಹೋಟೆಲ್‌ಗಳಿಗೆ ನೋಟಿಸ್‌ ನೀಡಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಅಧಿಕಾರಿಗಳು ಹೋಟೆಲ್‌ಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಡುಗೆ ಮನೆ, ಆಹಾರ ತಯಾರಿಕೆ, ನೀರಿನ ಗುಣಮಟ್ಟ ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸಲಾಗಿದೆ. ಈ ವೇಳೆ ನ್ಯೂನತೆ ಕಂಡುಬಂದ ಹೋಟೆಲ್‌ಗಳಿಗೆ ನೋಟಿಸ್ ನೀಡಲಾಗಿದೆ.
ಕೊಡಗು ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಗುಣಮಟ್ಟದ ಹಾಗೂ ಸ್ವಚ್ಛ ಆಹಾರ ದೊರೆಯಬೇಕು. ಆದರೆ ಕೆಲ ಹೋಟೆಲ್‌ಗಳಲ್ಲಿ ಸ್ವಚ್ಛತೆ ಕೊರತೆ, ಆಹಾರ ತಯಾರಿಕೆಯಲ್ಲಿ ನಿಯಮ ಉಲ್ಲಂಘನೆ ಕಂಡುಬರುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಡಿಕೇರಿಯ ಹಲವು ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಲವೆಡೆ ಅಶುಚಿತ್ವ ಕಂಡುಬಂದಿದ್ದು, ಆಹಾರ ತಯಾರಿಸುವ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಅಡುಗೆ ಮಾಡುವ ಸಿಬ್ಬಂದಿ ತಲೆಗೆ ಕ್ಯಾಪ್ ಅಥವಾ ಸ್ಕಾರ್ಫ್ ಧರಿಸಬೇಕು. ಕೈಗಳಿಗೆ ಆಭರಣ ಧರಿಸಬಾರದು. ಉಗುರುಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಆಹಾರ ತಯಾರಿಸುವಾಗ ಅಗತ್ಯವಿರುವ ನೈರ್ಮಲ್ಯ ಕ್ರಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಲೇಬಲ್ ಇಲ್ಲದ ಸ್ಪೈಸ್, ಚಾಕೊಲೇಟ್ ಸೇರಿದಂತೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡಿರುವ ಪ್ರಕರಣಗಳಲ್ಲೂ ಕ್ರಮ ಕೈಗೊಳ್ಳಲಾಗಿದೆ. ಇಂತಹ ಪ್ರಕರಣಗಳಲ್ಲಿ ಕಾನೂನು ಪ್ರಕಾರ ದಂಡ ವಿಧಿಸಲಾಗಿದ್ದು, ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಕೆಲ ಪ್ರಕರಣಗಳಲ್ಲಿ ತಪ್ಪೊಪ್ಪಿಗೆ ಪಡೆದು, ಸರ್ಕಾರಕ್ಕೆ ದಂಡ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS