ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ..

01 Oct 2026, 8:47 pm KANNADA SAKSHI

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ (KPSC) ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ತಡೆ ನೀಡಿದೆ.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಸಿತು.
ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್(Kapil Sibal) ವಾದ ಮಂಡಿಸಿ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾದ ದಿನದಿಂದಲೂ ಸಿಐಡಿ (CID) ಅಧಿಕಾರಿಗಳು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ಕೆಲವು ಅಭ್ಯರ್ಥಿಗಳು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅನಿರೀಕ್ಷಿತವಾಗಿ ಎಸ್‌ಐಟಿ ರಚನೆಗೆ ಆದೇಶಿಸಿದೆ. ಹೈಕೋರ್ಟ್ ಸೂಚಿಸಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಈ ಹಿಂದೆ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಯ ಮೇಲಿರುವ ಆರೋಪಗಳ ಕುರಿತ ದಾಖಲೆಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಅಭ್ಯರ್ಥಿಗಳ ಪರ ವಕೀಲರು, “ಹೈಕೋರ್ಟ್ ಇಡೀ ರಾಜ್ಯದ ಅರ್ಹ ಅಧಿಕಾರಿಗಳನ್ನು ಪರಿಶೀಲಿಸಿ ಸಮರ್ಥ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಿದೆ. ಹೀಗಿರುವಾಗ ಸರ್ಕಾರಕ್ಕೆ ಈ ತನಿಖೆಗೆ ಹಿಂಜರಿಕೆ ಏಕೆ? ಸರ್ಕಾರಕ್ಕೆ ತಮಗೆ ಬೇಕಾದ ಅಧಿಕಾರಿಗಳನ್ನೇ ನೇಮಿಸಬೇಕೆಂಬ ಉದ್ದೇಶವಿದೆಯೇ? ಅಧಿಕಾರಿಗಳ ಮೇಲೆ ಆಕ್ಷೇಪವಿದ್ದರೆ ಹೈಕೋರ್ಟ್‌ಗೆ ಹೋಗಬೇಕಿತ್ತು” ಎಂದು ಬಲವಾಗಿ ವಾದಿಸಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS