ಕಾವೇರಿ ನೀರು ಹರಿವು 2,000 ಕ್ಯೂಸೆಕ್‌ ಇಳಿಸಲು CWMAಗೆ ಕರ್ನಾಟಕ ಮನವಿ: ಚಲುವರಾಯಸ್ವಾಮಿ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಕಾವೇರಿ ನೀರು ಹರಿವು 2,000 ಕ್ಯೂಸೆಕ್‌ ಇಳಿಸಲು CWMAಗೆ ಕರ್ನಾಟಕ ಮನವಿ: ಚಲುವರಾಯಸ್ವಾಮಿ..

02 Oct 2026, 11:27 pm KANNADA SAKSHI

ಕಾವೇರಿ ಜಲಾನಯನ ಪ್ರದೇಶದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಜಲಾಶಯಗಳಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸೆಪ್ಟೆಂಬರ್ 24, 2026ರಂದು ನಡೆದ 58ನೇ ಸಭೆಯಲ್ಲಿ ನೀಡಿದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕರ್ನಾಟಕ ಸರ್ಕಾರ ಇಂದು ಪ್ರಾಧಿಕಾರಕ್ಕೆ ಅಧಿಕೃತ ಮನವಿ ಸಲ್ಲಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 4,000 ಕ್ಯೂಸೆಕ್‌ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಆದರೆ, ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಂಪೂರ್ಣ ಮುಕ್ತಾಯಗೊಂಡಿದ್ದು, ಕೃಷ್ಣರಾಜ ಸಾಗರ, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ.

ಪ್ರಸ್ತುತ ಈ ನಾಲ್ಕೂ ಜಲಾಶಯಗಳಲ್ಲಿ ಬಳಕೆಗೆ ಲಭ್ಯವಿರುವ ಒಟ್ಟು ನೀರು ಕೇವಲ 49 ಟಿಎಂಸಿ ಮಾತ್ರವಾಗಿದೆ. ಮುಂದಿನ ಜೂನ್ 2027ರವರೆಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆ, ಪರಿಸರ ಸಂರಕ್ಷಣೆ ಹಾಗೂ ಆವಿಯಾಗುವಿಕೆಯ ನಷ್ಟವನ್ನು ಸರಿದೂಗಿಸಲು ಈ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಕಾಯ್ದಿರಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯಕ್ಕಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕಾವೇರಿ ಕಣಿವೆಯ ಸುಮಾರು 47 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇಡೀ ಕಣಿವೆ ಪ್ರದೇಶ ತೀವ್ರ ಬರಗಾಲಕ್ಕೆ ಸಿಲುಕಿದೆ. ಆದಾಗ್ಯೂ, ಪ್ರಸಕ್ತ ಜಲ ವರ್ಷದಲ್ಲಿ ಪ್ರಾಧಿಕಾರದ ಎಲ್ಲಾ ನಿರ್ದೇಶನಗಳನ್ನು ಕರ್ನಾಟಕ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬಂದಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS