ರಾಜ್ಯದಲ್ಲಿ ಭೀಕರ ಬರ 46 ಸಾವಿರ ಕೋಟಿ ನಷ್ಟ, ಈ ವರ್ಷ ಜಿಎಸ್‌ಟಿ ಸಂಗ್ರಹ ಕುಸಿತ: ಜಿ. ಪರಮೇಶ್ವರ್‌..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ರಾಜ್ಯದಲ್ಲಿ ಭೀಕರ ಬರ 46 ಸಾವಿರ ಕೋಟಿ ನಷ್ಟ, ಈ ವರ್ಷ ಜಿಎಸ್‌ಟಿ ಸಂಗ್ರಹ ಕುಸಿತ: ಜಿ. ಪರಮೇಶ್ವರ್‌..

05 Oct 2026, 10:45 pm KANNADA SAKSHI

ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಡಿಸಿಎಂ ಜಿ. ಪರಮೇಶ್ವರ್ (G. Parameshwara) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರದ ತಂಡವನ್ನು ಮೂರು ತಂಡಗಳಾಗಿ ವಿಂಗಡಿಸಿ ರಾಜ್ಯದಲ್ಲಿ ಅಧ್ಯಯನ ನಡೆಸಲಾಗುತ್ತಿದೆ. ಅಕ್ಟೋಬರ್ 3ರಿಂದ 6ರವರೆಗೆ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿವೆ. ಪ್ರತಿಯೊಂದು ತಂಡವೂ ಮೂರರಿಂದ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ನಾವು ಮೊದಲನೇ ಪಟ್ಟಿಯಲ್ಲಿ ಬರಪೀಡಿತ ಎಂದು ಘೋಷಿಸಿದ್ದ 101 ತಾಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಮತ್ತು ನಾನು ಕೇಂದ್ರದ ತಂಡವನ್ನು ಬರಮಾಡಿಕೊಂಡು ರಾಜ್ಯದ ಬರ ಪರಿಸ್ಥಿತಿಯ ಕುರಿತು ಅವರಿಗೆ ಬ್ರೀಫ್ ಮಾಡಿದ್ದೇವೆ. ಎರಡನೇ ಹಂತದಲ್ಲಿ ಘೋಷಿಸಿರುವ ಉಳಿದ 77 ತಾಲೂಕುಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದೇವೆ. ಆ ಆಧಾರದ ಮೇಲೆ ಅವರು ಹೆಚ್ಚು ಕಡಿಮೆ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಕೆಲವು ಕಡೆ ಕೇಂದ್ರ ತಂಡದ ಸದಸ್ಯರು ರೈತರೊಂದಿಗೆ ನೇರವಾಗಿ ಮಾತನಾಡಿದ್ದಾರೆ. ಕೃಷಿ ಜಮೀನುಗಳಿಗೆ ತೆರಳಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ರಾಜ್ಯ ಸರ್ಕಾರ ನಡೆಸಿರುವ ಗ್ರೌಂಡ್ ಟ್ರೂಥಿಂಗ್‌ನಲ್ಲಿ ಕಂಡುಬಂದ ಪರಿಸ್ಥಿತಿಯನ್ನು ಅವರೂ ಸ್ಥಳದಲ್ಲಿಯೇ ನೋಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೇಂದ್ರ ತಂಡಕ್ಕೆ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಕೇಂದ್ರ ತಂಡದ ಪರಿಶೀಲನೆ ಇಂದು ಅಥವಾ ನಾಳೆ ಮುಗಿಯಲಿದೆ. ಬಳಿಕ ಅವರು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಆ ವರದಿಯನ್ನು ಆಧರಿಸಿ ನಾವು ಕೇಳಿರುವ ಪರಿಹಾರದ ಕುರಿತು ಕೇಂದ್ರ ಸರ್ಕಾರ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

ರಾಜ್ಯದ 177 ತಾಲೂಕುಗಳಲ್ಲಿ ಈಗಾಗಲೇ ಸುಮಾರು 46 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ. ಇದರಲ್ಲಿ ಸುಮಾರು 10 ಸಾವಿರದಿಂದ 11 ಸಾವಿರ ಕೋಟಿ ರೂ. ಪರಿಹಾರ ನೀಡುವಂತೆ ನಾವು ಮನವಿ ಮಾಡಿದ್ದೇವೆ. ಕೇಂದ್ರ ತಂಡದವರಿಗೂ ಈ ಕುರಿತು ಮನವಿ ಮಾಡಿದ್ದೇವೆ. ಕೇಂದ್ರಕ್ಕೆ ಅಂತಿಮವಾಗಿ ಮೆಮೊರಾಂಡಮ್ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮತ್ತು ನಾನು ಒಂದು ನಿಯೋಗದೊಂದಿಗೆ ತೆರಳಬೇಕು ಎಂಬ ಯೋಚನೆ ಮಾಡಿದ್ದೇವೆ. ನಿಯೋಗ ತೆರಳಿದಾಗಲೂ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಕೇಳುತ್ತೇವೆ ಎಂದು ತಿಳಿಸಿದರು.
ಕರ್ನಾಟಕವು ನಿರಂತರವಾಗಿ ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಯಾವುದೇ ರೀತಿಯ ಕೊರತೆ ಅಥವಾ ತಪ್ಪು ಆಗದಂತೆ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಜಿಎಸ್‌ಟಿ ಸಂಗ್ರಹ ಮಾಡಲಾಗುತ್ತಿದೆ. ಪ್ರತಿಯೊಂದು ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿಯೂ ರಾಜ್ಯದ ವಾದವನ್ನು ಮಂಡಿಸಿದ್ದೇವೆ. ಮುಖ್ಯಮಂತ್ರಿಗಳು ಕೃಷ್ಣ ಬೈರೇಗೌಡ ಅವರನ್ನು ಜಿಎಸ್‌ಟಿ ಕೌನ್ಸಿಲ್ ಸಭೆಗಳಿಗೆ ಡೆಪ್ಯುಟ್ ಮಾಡುತ್ತಿದ್ದರು. ಅವರು ರಾಜ್ಯದ ಪರವಾಗಿ ಏನೆಲ್ಲ ಹೇಳಬೇಕೋ ಅದನ್ನು ಮಂಡಿಸುತ್ತಿದ್ದರು ಎಂದು ಹೇಳಿದರು.
ಇಂದು ರಾಜ್ಯದಲ್ಲಿ ಬರ ಇದೆ. ನಮಗೆ ಬೆಳೆ ನಷ್ಟವಾಗಿದೆ. ಇದರ ಪರಿಣಾಮ ಪ್ರತಿಯೊಂದು ಕ್ಷೇತ್ರದ ಮೇಲೂ ಬೀಳುತ್ತದೆ. ಸ್ವಾಭಾವಿಕವಾಗಿ ಜಿಎಸ್‌ಟಿ ಸಂಗ್ರಹವೂ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹಣಕಾಸು ತಜ್ಞರು ಈಗಾಗಲೇ ಹೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅದು ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಬೇಕಿದೆ. ಅದಕ್ಕಾಗಿ ಅಗತ್ಯವಾದ ಬಫರ್ ಅನ್ನೂ ನಾವು ಇಟ್ಟುಕೊಂಡಿದ್ದೇವೆ. ಜಿಎಸ್‌ಟಿ ಸಂಗ್ರಹವನ್ನು ಹೆಚ್ಚಿಸಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂಬುದನ್ನೂ ನೋಡುತ್ತಿದ್ದೇವೆ ಎಂದರು.
ರಾಜ್ಯ ಹಿಂದೆಂದೂ ನೋಡದಂತಹ ಬರವನ್ನು ಎದುರಿಸುತ್ತಿದೆ. ಅದರ ಪರಿಣಾಮ ಖಂಡಿತವಾಗಿ ಎಲ್ಲ ಕ್ಷೇತ್ರಗಳ ಮೇಲೂ ಬೀಳುತ್ತದೆ. ಜಿಎಸ್‌ಟಿ ಮೇಲೂ ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS