ಹೈಕಮಾಂಡ್ಗೆ ಸ್ಟಿಂಗ್ ಆಪರೇಷನ್ (Sting Operation) ವೀಡಿಯೋ ಕೊಟ್ಟು ಡಿಕೆಶಿ (DK Shivakumar) ಸಿಎಂ ಆಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಸಚಿವರಿಗೆ ಎಚ್ಚರಿಕೆ ಕೊಟ್ಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಎಚ್ಚರಿಕೆ ಕೊಟ್ಟಿದ್ದಾರೆ ಅಂತೆ. ಸಿಎಂ ಆಗೋಕೆ ಕಾರಣ ಹೈಕಮಾಂಡ್ಗೆ ಸ್ಟಿಂಗ್ ಆಪರೇಷನ್ ವೀಡಿಯೋ ಕೊಟ್ಟು ಸಿಎಂ ಆಗಿದ್ದಾರೆ ಅಂತ ಕಾಂಗ್ರೆಸ್ನವರು ಹೇಳುತ್ತಾರೆ. ಈ ಸಿಎಂಗೆ ಸ್ಟಿಂಗ್ ಆಪರೇಷನ್ ಮಾಡೋದೆ ಕೆಲಸನಾ? ಮಂತ್ರಿಗಳ ಮೇಲೆ ವಿಶ್ವಾಸ ಇಲ್ವಾ ಎಂದು ಕಿಡಿಕಾರಿದರು.










