ನಂದಿಗ್ರಾಮ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ (Nandigram Bypoll Result) ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವಾಗಿದೆ. ಕಮಲ ಅಭ್ಯರ್ಥಿ ಹಸಿರಾಣಿ ರಾಥ್ (Hasi Rani Rath) ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ 1,22,753 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ರಾಜಕೀಯವಾಗಿ ಮಹತ್ವ ಪಡೆದಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಈ ಗೆಲುವಿನ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.
ನಂದಿಗ್ರಾಮ ಮತ್ತು ರೆಜಿನಗರ ಉಪಚುನಾವಣೆ ಫಲಿತಾಂಶಗಳು ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರದ ಮೇಲಿನ ಜನರ ವಿಶ್ವಾಸವನ್ನ ಮತ್ತಷ್ಟು ಹೆಚ್ಚಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಂಗಾಳ ಬಿಜೆಪಿ ಘಟಕ, ಬಿಜೆಪಿ ನೇತೃತ್ವದ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿದ ಬೆಂಬಲವೇ ಈ ಫಲಿತಾಂಶಕ್ಕೆ ಕಾರಣ ಎಂದು ಹೇಳಿಕೊಂಡಿದೆ.










