ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ – ದೀಪ ಬೆಳಗಿಸಲು ಪ್ರಧಾನಿ ಮೋದಿ, ಸ್ಮಿತ್‌ ಮಚ್ಚಾರ್‌ಗೆ ನೆತನ್ಯಾಹು ಆಹ್ವಾನ!

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ – ದೀಪ ಬೆಳಗಿಸಲು ಪ್ರಧಾನಿ ಮೋದಿ, ಸ್ಮಿತ್‌ ಮಚ್ಚಾರ್‌ಗೆ ನೆತನ್ಯಾಹು ಆಹ್ವಾನ!

23 Oct 2026, 7:13 am KANNADA SAKSHI

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ. ಇದೇ ಸಂದರ್ಭ ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ ಅವರನ್ನೂ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಕಾರ್ಯಕ್ರಮದಲ್ಲಿ ಗೌರವಿಸುವುದಾಗಿ ತಿಳಿಸಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ನೆತನ್ಯಾಹು, ಭಾರತದ ಪ್ರಧಾನಿ ಮೋದಿ ಅವರು ಆಹ್ವಾನಕ್ಕೆ ಧನ್ಯವಾದ ತಿಳಿಸಿರುವುದಾಗಿಯೂ ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಮತ್ತು ಇಸ್ರೇಲ್ ಭೂಮಿಯ ಮೇಲೂ, ವಾಯುಮಾರ್ಗದಲ್ಲೂ ಒಟ್ಟಾಗಿ ಹೋರಾಡುತ್ತಿವೆ ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ʻನನ್ನ ಸ್ನೇಹಿತ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದೆ. ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧೈರ್ಯಶಾಲಿ ಭಾರತೀಯ ಪೈಲಟ್ ಅವರೊಂದಿಗೆ ದೀಪ ಬೆಳಗಿಸುವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದೆ. ಮೋದಿ ಅವರು ಆಹ್ವಾನಕ್ಕೆ ಧನ್ಯವಾದ ತಿಳಿಸಿದರು. ಭೂಮಿಯ ಮೇಲೆ ಮತ್ತು ವಾಯುಮಾರ್ಗದಲ್ಲಿ ಭಾರತ ಹಾಗೂ ಇಸ್ರೇಲ್ ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ಹೋರಾಡುತ್ತಿವೆ ಎಂದು ಹೇಳಿದರಲ್ಲದೇ, ಭಾರತ ಮತ್ತು ಇಸ್ರೇಲ್‌ ನಡುವಿನ ದೀರ್ಘಕಾಲದ ಸಂಬಂಧದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS