ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯಿಂದ 147 ಯೋಜನೆಗಳಿಗೆ ಒಪ್ಪಿಗೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯಿಂದ 147 ಯೋಜನೆಗಳಿಗೆ ಒಪ್ಪಿಗೆ..

09 Nov 2026, 9:14 pm KANNADA SAKSHI

ರಾಜ್ಯದಲ್ಲಿ (Karnataka) ಬೆಂಗಳೂರಿನ (Bengaluru) ಆಚೆಗೂ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲು ಒಟ್ಟು 6,825 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ 147 ಕೈಗಾರಿಕಾ ಯೋಜನೆಗಳಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B Patil) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯು (Single Window Clearance Committee) ಒಪ್ಪಿಗೆ ನೀಡಿದೆ.
ʼಈ ಯೋಜನೆಗಳ ಮೂಲಕ ರಾಜ್ಯದಾದ್ಯಂತ 18,600 ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಅನುಮೋದನೆ ಪಡೆದ ಯೋಜನೆಗಳ ಪೈಕಿ 131 ಯೋಜನೆಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಆಗಲಿದ್ದು, ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಗೆ ಇನ್ನಷ್ಟು ಉತ್ತೇಜನ ನೀಡಲಿದೆʼ ಎಂದು ಸಭೆ ಬಳಿಕ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.
ಪ್ರಮುಖ ಹೂಡಿಕೆಗಳ ಪೈಕಿ ದೇವನಹಳ್ಳಿ ಬಳಿ ಅದ್ವೈತ್‌ ಟೆಕ್‌ನ 380 ಕೋಟಿ‌ ರೂ. ವೆಚ್ಚದ ಐಟಿ ಹಾಗೂ ಐಟಿಇಎಸ್‌ ಪಾರ್ಕ್‌ ನಿರ್ಮಾಣ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಒಎಫ್‌ಬಿ ಟೆಕ್‌ ಲಿಮಿಟೆಡ್‌ನ 245 ಕೋಟಿ ರೂ. ವೆಚ್ಚದ ಕಂಟೇನರ್‌ ಗಾಜಿನ ಘಟಕ ನಿರ್ಮಾಣ, ಮೈಸೂರು ಜಿಲ್ಲೆಯ ಕೊಚನಹಳ್ಳಿಯಲ್ಲಿ ಎಫ್‌ಐಇಎಂ ಇಂಡಸ್ಟ್ರೀಸ್‌ನ 183 ಕೋಟಿ ರೂ. ಮೊತ್ತದ ಎಲೆಕ್ಟ್ರಾನಿಕ್‌ ಘಟಕಗಳ ತಯಾರಿಕೆ, ಬಳ್ಳಾರಿ ಜಿಲ್ಲೆಯ ಬೆಳಗಲ್ಲುವಿನಲ್ಲಿ ಅನಂತ್‌ ಸ್ಟೀಲ್ಸ್‌ನ 119.41 ಕೋಟಿ ರೂ. ಮೊತ್ತದ ಉಕ್ಕಿನ ಸರಳುಗಳ ತಯಾರಿಕೆ ಘಟಕಗಳು ಸೇರಿವೆ.
ವಿವಿಧ ವಲಯಗಳಲ್ಲಿ ಹೂಡಿಕೆಗೆ ಉತ್ತೇಜನʼಅನುಮೋದನೆ ಪಡೆದ ಯೋಜನೆಗಳು ಆಹಾರ ಸಂಸ್ಕರಣೆ, ಜವಳಿ, ಡೇಟಾ ಸೆಂಟರ್, ಸೆಮಿಕಂಡಕ್ಟರ್, ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ಐಟಿ ಪಾರ್ಕ್, ಮುದ್ರಿತ ಸರ್ಕ್ಯೂಟ್ ಬೋರ್ಡ್‌ಗಳ ಜೋಡಣೆ, ವೈಮಾಂತರಿಕ್ಷ, ಸಕ್ಕರೆ, ಜನರಲ್‌ ಎಂಜಿನಿಯರಿಂಗ್ ಸೇರಿದಂತೆ ವಿವಿಧ ತಯಾರಿಕಾ ವಲಯಗಳಿಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ಕೈಗಾರಿಕಾ ವಲಯದಲ್ಲಿ ವೈವಿಧ್ಯಮಯ ಹೂಡಿಕೆಗಳಿಗೆ ಗಮನಾರ್ಹ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ಆಚೆಗಿನ ಕೈಗಾರಿಕಾ ಬೆಳವಣಿಗೆಗೆ ಆದ್ಯತೆʼಬಹುತೇಕ ಯೋಜನೆಗಳು ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆʼ ಎಂದು ಸಚಿವರು ತಿಳಿಸಿದ್ದಾರೆ.
ಸಭೆಯಲ್ಲಿ 50 ಕೋಟಿ ರೂ.ಗೂ ಅಧಿಕ ಬಂಡವಾಳ ಹೂಡಿಕೆಯ 36 ಪ್ರಮುಖ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 4,507.71 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 12,074 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

15 ಕೋಟಿ ರೂ. ನಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 108 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 2,238.37 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 6,526 ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದ ಮೂರು ಯೋಜನೆಗಳಿಗೂ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 79.85 ಕೋಟಿ ರೂ. ಹೂಡಿಕೆಯಾಗಲಿದೆ.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಖುಷ್ಬೂ ಜಿ. ಚೌಧರಿ, ಕೆಐಎಡಿಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Generating image…

ವಿವಿಧ ವಲಯಗಳಲ್ಲಿ ಹೂಡಿಕೆಗೆ ಉತ್ತೇಜನ
ʼಅನುಮೋದನೆ ಪಡೆದ ಯೋಜನೆಗಳು ಆಹಾರ ಸಂಸ್ಕರಣೆ, ಜವಳಿ, ಡೇಟಾ ಸೆಂಟರ್, ಸೆಮಿಕಂಡಕ್ಟರ್, ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ಐಟಿ ಪಾರ್ಕ್, ಮುದ್ರಿತ ಸರ್ಕ್ಯೂಟ್ ಬೋರ್ಡ್‌ಗಳ ಜೋಡಣೆ, ವೈಮಾಂತರಿಕ್ಷ, ಸಕ್ಕರೆ, ಜನರಲ್‌ ಎಂಜಿನಿಯರಿಂಗ್ ಸೇರಿದಂತೆ ವಿವಿಧ ತಯಾರಿಕಾ ವಲಯಗಳಿಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ಕೈಗಾರಿಕಾ ವಲಯದಲ್ಲಿ ವೈವಿಧ್ಯಮಯ ಹೂಡಿಕೆಗಳಿಗೆ ಗಮನಾರ್ಹ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು ಆಚೆಗಿನ ಕೈಗಾರಿಕಾ ಬೆಳವಣಿಗೆಗೆ ಆದ್ಯತೆ
ʼಬಹುತೇಕ ಯೋಜನೆಗಳು ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆʼ ಎಂದು ಸಚಿವರು ತಿಳಿಸಿದ್ದಾರೆ.

ಸಭೆಯಲ್ಲಿ 50 ಕೋಟಿ ರೂ.ಗೂ ಅಧಿಕ ಬಂಡವಾಳ ಹೂಡಿಕೆಯ 36 ಪ್ರಮುಖ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 4,507.71 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 12,074 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

15 ಕೋಟಿ ರೂ. ನಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 108 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 2,238.37 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 6,526 ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದ ಮೂರು ಯೋಜನೆಗಳಿಗೂ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 79.85 ಕೋಟಿ ರೂ. ಹೂಡಿಕೆಯಾಗಲಿದೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಖುಷ್ಬೂ ಜಿ. ಚೌಧರಿ, ಕೆಐಎಡಿಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Editor Reporter
kannadasakshi.in

ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯಿಂದ 147 ಯೋಜನೆಗಳಿಗೆ ಒಪ್ಪಿಗೆ..

ರಾಜ್ಯದಲ್ಲಿ (Karnataka) ಬೆಂಗಳೂರಿನ (Bengaluru) ಆಚೆಗೂ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲು ಒಟ್ಟು 6,825 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ 147 ಕೈಗಾರಿಕಾ ಯೋಜನೆಗಳಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B Patil) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯು (Single Window Clearance Committee) ಒಪ್ಪಿಗೆ ನೀಡಿದೆ.
ʼಈ ಯೋಜನೆಗಳ ಮೂಲಕ ರಾಜ್ಯದಾದ್ಯಂತ 18,600 ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಅನುಮೋದನೆ ಪಡೆದ ಯೋಜನೆಗಳ ಪೈಕಿ 131 ಯೋಜನೆಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಆಗಲಿದ್ದು, ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಗೆ ಇನ್ನಷ್ಟು ಉತ್ತೇಜನ ನೀಡಲಿದೆʼ ಎಂದು ಸಭೆ ಬಳಿಕ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.
ಪ್ರಮುಖ ಹೂಡಿಕೆಗಳ ಪೈಕಿ ದೇವನಹಳ್ಳಿ ಬಳಿ ಅದ್ವೈತ್‌ ಟೆಕ್‌ನ 380 ಕೋಟಿ‌ ರೂ. ವೆಚ್ಚದ ಐಟಿ ಹಾಗೂ ಐಟಿಇಎಸ್‌ ಪಾರ್ಕ್‌ ನಿರ್ಮಾಣ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಒಎಫ್‌ಬಿ ಟೆಕ್‌ ಲಿಮಿಟೆಡ್‌ನ 245 ಕೋಟಿ ರೂ. ವೆಚ್ಚದ ಕಂಟೇನರ್‌ ಗಾಜಿನ ಘಟಕ ನಿರ್ಮಾಣ, ಮೈಸೂರು ಜಿಲ್ಲೆಯ ಕೊಚನಹಳ್ಳಿಯಲ್ಲಿ ಎಫ್‌ಐಇಎಂ ಇಂಡಸ್ಟ್ರೀಸ್‌ನ 183 ಕೋಟಿ ರೂ. ಮೊತ್ತದ ಎಲೆಕ್ಟ್ರಾನಿಕ್‌ ಘಟಕಗಳ ತಯಾರಿಕೆ, ಬಳ್ಳಾರಿ ಜಿಲ್ಲೆಯ ಬೆಳಗಲ್ಲುವಿನಲ್ಲಿ ಅನಂತ್‌ ಸ್ಟೀಲ್ಸ್‌ನ 119.41 ಕೋಟಿ ರೂ. ಮೊತ್ತದ ಉಕ್ಕಿನ ಸರಳುಗಳ ತಯಾರಿಕೆ ಘಟಕಗಳು ಸೇರಿವೆ.
ವಿವಿಧ ವಲಯಗಳಲ್ಲಿ ಹೂಡಿಕೆಗೆ ಉತ್ತೇಜನʼಅನುಮೋದನೆ ಪಡೆದ ಯೋಜನೆಗಳು ಆಹಾರ ಸಂಸ್ಕರಣೆ, ಜವಳಿ, ಡೇಟಾ ಸೆಂಟರ್, ಸೆಮಿಕಂಡಕ್ಟರ್, ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ಐಟಿ ಪಾರ್ಕ್, ಮುದ್ರಿತ ಸರ್ಕ್ಯೂಟ್ ಬೋರ್ಡ್‌ಗಳ ಜೋಡಣೆ, ವೈಮಾಂತರಿಕ್ಷ, ಸಕ್ಕರೆ, ಜನರಲ್‌ ಎಂಜಿನಿಯರಿಂಗ್ ಸೇರಿದಂತೆ ವಿವಿಧ ತಯಾರಿಕಾ ವಲಯಗಳಿಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ಕೈಗಾರಿಕಾ ವಲಯದಲ್ಲಿ ವೈವಿಧ್ಯಮಯ ಹೂಡಿಕೆಗಳಿಗೆ ಗಮನಾರ್ಹ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ಆಚೆಗಿನ ಕೈಗಾರಿಕಾ ಬೆಳವಣಿಗೆಗೆ ಆದ್ಯತೆʼಬಹುತೇಕ ಯೋಜನೆಗಳು ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆʼ ಎಂದು ಸಚಿವರು ತಿಳಿಸಿದ್ದಾರೆ.
ಸಭೆಯಲ್ಲಿ 50 ಕೋಟಿ ರೂ.ಗೂ ಅಧಿಕ ಬಂಡವಾಳ ಹೂಡಿಕೆಯ 36 ಪ್ರಮುಖ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 4,507.71 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 12,074 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

15 ಕೋಟಿ ರೂ. ನಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 108 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 2,238.37 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 6,526 ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದ ಮೂರು ಯೋಜನೆಗಳಿಗೂ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 79.85 ಕೋಟಿ ರೂ. ಹೂಡಿಕೆಯಾಗಲಿದೆ.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಖುಷ್ಬೂ ಜಿ. ಚೌಧರಿ, ಕೆಐಎಡಿಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS