ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ 3ನೇ ದಿನ – ಬೇಡಿಕೆ ಈಡೇರುವವರೆಗೂ ಕದಲಲ್ಲ ಎಂದು ಪಟ್ಟು..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ 3ನೇ ದಿನ – ಬೇಡಿಕೆ ಈಡೇರುವವರೆಗೂ ಕದಲಲ್ಲ ಎಂದು ಪಟ್ಟು..

19 Nov 2026, 8:56 am KANNADA SAKSHI

ಆಶಾ ಕಾರ್ಯಕರ್ತೆಯರು (Asha Workers) ಮತ್ತೆ ಸರ್ಕಾರದ ವಿರುದ್ಧ ಸಮರ ಸಾರಿದ್ದು, ಫ್ರೀಡಂಪಾರ್ಕ್‌ನಲ್ಲಿ ನಡೆಸುತ್ತಿರುವ ಹೋರಾಟ (Protest) ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸರ್ಕಾರದಿಂದ ಗುಡ್ ನ್ಯೂಸ್ ಸಿಗುವ ನಿರೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರಿದ್ದಾರೆ. ಇಂದಿನ ಸಚಿವ ಸಂಪುಟ (Cabinet Meeting) ಸಭೆಯತ್ತ ಆಶಾ ಕಾರ್ಯಕರ್ತೆಯರ ಚಿತ್ತ ನೆಟ್ಟಿದೆ.
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ 15,000 ಗೌರವಧನ, 5 ಲಕ್ಷ ನಿವೃತ್ತಿ ಇಡಿಗಂಟು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ರಾಜ್ಯಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಲಿಖಿತ ಭರವಸೆ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬೆಂಗಳೂರಿನ ಫ್ರೀಡಂಪಾರ್ಕ್ ಆವರಣದಲ್ಲಿ ಜಾಗ ಸಾಲದಂತಾಗಿದೆ. ಇದರಿಂದಾಗಿ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ ಪಕ್ಕದ ಕಾಳಿದಾಸ ರಸ್ತೆ ಮತ್ತು ಮುಂಭಾಗದ ಶೇಷಾದ್ರಿ ರಸ್ತೆ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ಅಲ್ಲದೆ ರಾತ್ರಿ ಕೊರೆವ ಚಳಿಯನ್ನೂ ಲೆಕ್ಕಿಸದೇ ಕಂಬಳಿ ಹೊದ್ದು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕೊರೆವ ಚಳಿಯಲ್ಲೂ ಬೀದಿಯಲ್ಲಿ ಪುಟಾಣಿ ಮಕ್ಕಳನ್ನು ಕಟ್ಟಿಕೊಂಡು ಪ್ರತಿಭಟಿಸುತ್ತಿದ್ದಾರೆ.
ಇಂದಿನ ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ:ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮುಂದುವರಿದಿದೆ. ಇತ್ತ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯ ಬೇಡಿಕೆಯಾದ 15,000 ಮಾಸಿಕ ವೇತನ ನಿಗದಿಪಡಿಸುವ ಬಗ್ಗೆ ಇಂದಿನ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕರಾದ ರಜನಿಯವರು ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಘೋಷಿಸಿದೆ.
ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು?– 15,000ರೂಪಾಯಿ ನಿಶ್ಚಿತ ಮಾಸಿಕ ಗೌರವಧನ– ಸಮಸ್ತ ಆ್ಯಪ್ ಮೂಲಕ ಒತ್ತಾಯದ ಮೊಬೈಲ್ ಕೆಲಸ ಕೈಬಿಡಬೇಕು– ನಿವೃತ್ತರಾಗಿರುವವರಿಗೆ ಬಾಕಿ ಇಡಿಗಂಟು ಬಿಡುಗಡೆ ಮಾಡಬೇಕು– ಆಶಾ ನಿಧಿ ಬಾಕಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು– ಸುಗಮಕಾರರ ಮರುನೇಮಕ & ಬಾಕಿ ವೇತನ ಪಾವತಿಸಬೇಕು– ಎನ್‌ಐಒಎಸ್ ತರಬೇತಿ ಪ್ರೋತ್ಸಾಹಧನ ನೀಡಬೇಕು– ತೀವ್ರ ಕಾಯಿಲೆ ಚಿಕಿತ್ಸಾ ಅವಧಿಯಲ್ಲಿ 3 ತಿಂಗಳ ಗೌರವಧನ– ಸೇವಾ ನಿವೃತ್ತಿ ಇಡಿಗಂಟನ್ನು ಬಂಗಾಳ ಮಾದರಿ 5 ಲಕ್ಷಕ್ಕೆ ಹೆಚ್ಚಿಸಬೇಕು
ಹೀಗೆ ಹತ್ತಾರು ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ. ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರು & ಸಿಎಂ ಜೊತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.
ಒಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆಯತ್ತ ಆಶಾ ಕಾರ್ಯಕರ್ತೆಯರ ಚಿತ್ತ ನೆಟ್ಟಿದೆ. ವೇತನ ಹೆಚ್ಚಳದ ಬಗ್ಗೆ ನಿರ್ಧರಿಸದೇ ಹೋದರೆ ಪ್ರತಿಭಟನೆ ಅನಿರ್ದಿಷ್ಟಾವಧಿಗೆ ಮುಂದುವರೆಯುವ ಸಾಧ್ಯತೆಯಿದೆ.

Generating image…

ಇಂದಿನ ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ:
ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮುಂದುವರಿದಿದೆ. ಇತ್ತ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯ ಬೇಡಿಕೆಯಾದ 15,000 ಮಾಸಿಕ ವೇತನ ನಿಗದಿಪಡಿಸುವ ಬಗ್ಗೆ ಇಂದಿನ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕರಾದ ರಜನಿಯವರು ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಘೋಷಿಸಿದೆ.

ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು?
– 15,000ರೂಪಾಯಿ ನಿಶ್ಚಿತ ಮಾಸಿಕ ಗೌರವಧನ
– ಸಮಸ್ತ ಆ್ಯಪ್ ಮೂಲಕ ಒತ್ತಾಯದ ಮೊಬೈಲ್ ಕೆಲಸ ಕೈಬಿಡಬೇಕು
– ನಿವೃತ್ತರಾಗಿರುವವರಿಗೆ ಬಾಕಿ ಇಡಿಗಂಟು ಬಿಡುಗಡೆ ಮಾಡಬೇಕು
– ಆಶಾ ನಿಧಿ ಬಾಕಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು
– ಸುಗಮಕಾರರ ಮರುನೇಮಕ & ಬಾಕಿ ವೇತನ ಪಾವತಿಸಬೇಕು
– ಎನ್‌ಐಒಎಸ್ ತರಬೇತಿ ಪ್ರೋತ್ಸಾಹಧನ ನೀಡಬೇಕು
– ತೀವ್ರ ಕಾಯಿಲೆ ಚಿಕಿತ್ಸಾ ಅವಧಿಯಲ್ಲಿ 3 ತಿಂಗಳ ಗೌರವಧನ
– ಸೇವಾ ನಿವೃತ್ತಿ ಇಡಿಗಂಟನ್ನು ಬಂಗಾಳ ಮಾದರಿ 5 ಲಕ್ಷಕ್ಕೆ ಹೆಚ್ಚಿಸಬೇಕು

ಹೀಗೆ ಹತ್ತಾರು ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ. ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರು & ಸಿಎಂ ಜೊತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆಯತ್ತ ಆಶಾ ಕಾರ್ಯಕರ್ತೆಯರ ಚಿತ್ತ ನೆಟ್ಟಿದೆ. ವೇತನ ಹೆಚ್ಚಳದ ಬಗ್ಗೆ ನಿರ್ಧರಿಸದೇ ಹೋದರೆ ಪ್ರತಿಭಟನೆ ಅನಿರ್ದಿಷ್ಟಾವಧಿಗೆ ಮುಂದುವರೆಯುವ ಸಾಧ್ಯತೆಯಿದೆ.

Editor Reporter
kannadasakshi.in

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ 3ನೇ ದಿನ – ಬೇಡಿಕೆ ಈಡೇರುವವರೆಗೂ ಕದಲಲ್ಲ ಎಂದು ಪಟ್ಟು..

ಆಶಾ ಕಾರ್ಯಕರ್ತೆಯರು (Asha Workers) ಮತ್ತೆ ಸರ್ಕಾರದ ವಿರುದ್ಧ ಸಮರ ಸಾರಿದ್ದು, ಫ್ರೀಡಂಪಾರ್ಕ್‌ನಲ್ಲಿ ನಡೆಸುತ್ತಿರುವ ಹೋರಾಟ (Protest) ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸರ್ಕಾರದಿಂದ ಗುಡ್ ನ್ಯೂಸ್ ಸಿಗುವ ನಿರೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರಿದ್ದಾರೆ. ಇಂದಿನ ಸಚಿವ ಸಂಪುಟ (Cabinet Meeting) ಸಭೆಯತ್ತ ಆಶಾ ಕಾರ್ಯಕರ್ತೆಯರ ಚಿತ್ತ ನೆಟ್ಟಿದೆ.
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ 15,000 ಗೌರವಧನ, 5 ಲಕ್ಷ ನಿವೃತ್ತಿ ಇಡಿಗಂಟು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ರಾಜ್ಯಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಲಿಖಿತ ಭರವಸೆ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬೆಂಗಳೂರಿನ ಫ್ರೀಡಂಪಾರ್ಕ್ ಆವರಣದಲ್ಲಿ ಜಾಗ ಸಾಲದಂತಾಗಿದೆ. ಇದರಿಂದಾಗಿ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ ಪಕ್ಕದ ಕಾಳಿದಾಸ ರಸ್ತೆ ಮತ್ತು ಮುಂಭಾಗದ ಶೇಷಾದ್ರಿ ರಸ್ತೆ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ಅಲ್ಲದೆ ರಾತ್ರಿ ಕೊರೆವ ಚಳಿಯನ್ನೂ ಲೆಕ್ಕಿಸದೇ ಕಂಬಳಿ ಹೊದ್ದು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕೊರೆವ ಚಳಿಯಲ್ಲೂ ಬೀದಿಯಲ್ಲಿ ಪುಟಾಣಿ ಮಕ್ಕಳನ್ನು ಕಟ್ಟಿಕೊಂಡು ಪ್ರತಿಭಟಿಸುತ್ತಿದ್ದಾರೆ.
ಇಂದಿನ ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ:ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮುಂದುವರಿದಿದೆ. ಇತ್ತ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯ ಬೇಡಿಕೆಯಾದ 15,000 ಮಾಸಿಕ ವೇತನ ನಿಗದಿಪಡಿಸುವ ಬಗ್ಗೆ ಇಂದಿನ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕರಾದ ರಜನಿಯವರು ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಘೋಷಿಸಿದೆ.
ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು?– 15,000ರೂಪಾಯಿ ನಿಶ್ಚಿತ ಮಾಸಿಕ ಗೌರವಧನ– ಸಮಸ್ತ ಆ್ಯಪ್ ಮೂಲಕ ಒತ್ತಾಯದ ಮೊಬೈಲ್ ಕೆಲಸ ಕೈಬಿಡಬೇಕು– ನಿವೃತ್ತರಾಗಿರುವವರಿಗೆ ಬಾಕಿ ಇಡಿಗಂಟು ಬಿಡುಗಡೆ ಮಾಡಬೇಕು– ಆಶಾ ನಿಧಿ ಬಾಕಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು– ಸುಗಮಕಾರರ ಮರುನೇಮಕ & ಬಾಕಿ ವೇತನ ಪಾವತಿಸಬೇಕು– ಎನ್‌ಐಒಎಸ್ ತರಬೇತಿ ಪ್ರೋತ್ಸಾಹಧನ ನೀಡಬೇಕು– ತೀವ್ರ ಕಾಯಿಲೆ ಚಿಕಿತ್ಸಾ ಅವಧಿಯಲ್ಲಿ 3 ತಿಂಗಳ ಗೌರವಧನ– ಸೇವಾ ನಿವೃತ್ತಿ ಇಡಿಗಂಟನ್ನು ಬಂಗಾಳ ಮಾದರಿ 5 ಲಕ್ಷಕ್ಕೆ ಹೆಚ್ಚಿಸಬೇಕು
ಹೀಗೆ ಹತ್ತಾರು ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ. ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರು & ಸಿಎಂ ಜೊತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.
ಒಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆಯತ್ತ ಆಶಾ ಕಾರ್ಯಕರ್ತೆಯರ ಚಿತ್ತ ನೆಟ್ಟಿದೆ. ವೇತನ ಹೆಚ್ಚಳದ ಬಗ್ಗೆ ನಿರ್ಧರಿಸದೇ ಹೋದರೆ ಪ್ರತಿಭಟನೆ ಅನಿರ್ದಿಷ್ಟಾವಧಿಗೆ ಮುಂದುವರೆಯುವ ಸಾಧ್ಯತೆಯಿದೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS