ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿದೆ: ಎ.ಎಸ್ ಪೊನ್ನಣ್ಣ ಭರವಸೆ..

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿದೆ: ಎ.ಎಸ್ ಪೊನ್ನಣ್ಣ ಭರವಸೆ..

20 Nov 2026, 10:48 pm KANNADA SAKSHI

ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎನ್ನುವುದು ಸರಿಯಲ್ಲ. (ASHA workers’ protest) ಅವರ ಬೇಡಿಕೆಗಳು ಸರ್ಕಾರದ ಗಮನದಲ್ಲಿದ್ದು, ಸೂಕ್ತ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳ (D K Shivakumar) ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ (A S Ponnanna) ಹೇಳಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು ಹಣದುಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೇತನ ಹೆಚ್ಚಳಕ್ಕೆ ಒತ್ತಾಯಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ತಮ್ಮ ಬೇಡಿಕೆಗಳನ್ನು ಸರಿಯಾದ ಮಾರ್ಗದಲ್ಲಿ ಸಲ್ಲಿಸಬೇಕು. ಕೆಲಸಕ್ಕೆ ಸೇರುವಾಗಲೇ ವೇತನದ ಬಗ್ಗೆ ಅರಿವು ಇರುತ್ತದೆ. ಹಾಗೆಂದು ವೇತನ ಹೆಚ್ಚಳ ಕೇಳುವುದನ್ನು ನಾವು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧವೂ ಪೊನ್ನಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಕಾಮಗಾರಿಗಳ ಶೇಕಡಾ 84ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಹಾಗೂ ಸಹಕಾರ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚಕ್ಕೂ ಕೇಂದ್ರದ ನೆರವು ದೊರೆಯುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನಡೆಯಬೇಕಾದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಸೂಕ್ತ ಸಹಕಾರ ನೀಡಬೇಕು.
ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಒಂದು ರೀತಿಯ, ಇತರ ರಾಜ್ಯಗಳಿಗೆ ಮತ್ತೊಂದು ರೀತಿಯ ಅನುದಾನ ನೀಡುವ ಮೂಲಕ ತಾರತಮ್ಯ ಮಾಡಬಾರದು ಎಂದು ಆಗ್ರಹಿಸಿದ್ದಾರೆ. ಆರೋಗ್ಯ ಕ್ಷೇತ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದ್ದು, ಕೇಂದ್ರ ಸರ್ಕಾರವೂ ತನ್ನ ಪಾಲಿನ ನೆರವು ನೀಡಬೇಕು. ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಹೆಚ್ಚುವರಿ ಅನುದಾನ ನೀಡುವ ವಿಚಾರದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ನಮಗೆ ಹೆಚ್ಚುವರಿ ಹಣ ಬೇಡ, ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಪಾಲನ್ನು ನೀಡಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯಕ್ಕೆ ಬರಬೇಕಾದ ಅನುದಾನ ದೊರೆತರೆ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲು ಸಾಧ್ಯ. ಕೇಂದ್ರದಲ್ಲಿ ಅಧಿಕಾರ ಹೊಂದಿರುವ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಬೇಕೇ ಹೊರತು, ಕೇವಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಎ.ಎಸ್. ಪೊನ್ನಣ್ಣ ತಿರುಗೇಟು ನೀಡಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS