ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಅವರು ವಿಡಿಯೋ ಕರೆ ಮೂಲಕ ಕಾರ್ಯಕರ್ತೆಯರೊಂದಿಗೆ ಮಾತನಾಡಿ, ನಿಮ್ಮ ಸಮಸ್ಯೆಗಳನ್ನು ಖಂಡಿತವಾಗಿಯೂ ಬಗೆಹರಿಸುತ್ತೇವೆ. ಸರ್ಕಾರ ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಭರವಸೆ ನೀಡಿದ್ದಾರೆ.
ಜಪಾನ್‌ನಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿಡಿಯೋ ಕರೆ ಮೂಲಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮುಖಂಡರೊಂದಿಗೆ ಮಂಗಳವಾರ ಅವರು ಚರ್ಚೆ ನಡೆಸಿದರು. ಆಶಾ ಕಾರ್ಯಕರ್ತೆಯರ ಬಗ್ಗೆ ನನಗೆ ವಿಶೇಷ ಕಾಳಜಿ ಇದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುತ್ತೇವೆ. ನನ್ನ ಮೇಲೆ ವಿಶ್ವಾಸವಿಟ್ಟು ಪ್ರತಿಭಟನೆಯನ್ನು ಕೈಬಿಡಿ ಎಂದು ಮನವಿ ಮಾಡಿದರು.
ನಿಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತೇವೆ, ನಿಮ್ಮ ಕೋಪವನ್ನು ಬದಿಗಿಟ್ಟು ಪ್ರತಿಭಟನೆ ಹಿಂಪಡೆಯಿರಿ ಎಂದು ಡಿಕೆ ಶಿವಕುಮಾರ್ ಹೇಳಿದರು. ತಮ್ಮ ಮನವಿಯ ಹೊರತಾಗಿಯೂ ನಿರಶನ ಮುಂದುವರಿಸುತ್ತಿರುವುದರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಆಶಾ ಕಾರ್ಯಕರ್ತೆಯರಿಗೆ ತೊಂದರೆಯಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.








