ಹಿರಿಯೂರು ಉಪಚುನಾವಣೆ ಟಿಕೆಟ್ ಕಸರತ್ತು: ಜೆಡಿಎಸ್ ಚಿಹ್ನೆಯಡಿ ಬಿಜೆಪಿ ಅಭ್ಯರ್ಥಿ?

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಹಿರಿಯೂರು ಉಪಚುನಾವಣೆ ಟಿಕೆಟ್ ಕಸರತ್ತು: ಜೆಡಿಎಸ್ ಚಿಹ್ನೆಯಡಿ ಬಿಜೆಪಿ ಅಭ್ಯರ್ಥಿ?

26 Nov 2026, 11:17 pm KANNADA SAKSHI

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ(Hiriyur By Election) ಕಾವು ಏರುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ತೀವ್ರ ಚರ್ಚೆ ಹಾಗೂ ಗೊಂದಲ ಮುಂದುವರಿದಿದೆ. ಈ ನಡುವೆ ಮೈತ್ರಿ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಮಹತ್ವದ ಸಮನ್ವಯ ಸಭೆ ನಡೆದಿದೆ.
ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ(HD Kumaraswamy) ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್(R Ashok), ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ಮುಖಂಡರು ಭಾಗವಹಿಸಿದ್ದರು.

ಹಿರಿಯೂರು ಕ್ಷೇತ್ರವನ್ನು ಮಿತ್ರಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ(BJP) ನಾಯಕರು ಸಭೆಯಲ್ಲಿ ಒಲವು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೂ, ಟಿಕೆಟ್ ಆಕಾಂಕ್ಷಿಯಾಗಿರುವ ರಾಜಣ್ಣ ಅವರನ್ನೇ ಜೆಡಿಎಸ್ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬ ಪ್ರಸ್ತಾಪವನ್ನು ಬಿಜೆಪಿ ನಾಯಕರು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷದ ಆಕಾಂಕ್ಷಿಯಾಗಿರುವ ಸಣ್ಣಚಿತ್ತಯ್ಯ ಅವರನ್ನೇ ಕಣಕ್ಕಿಳಿಸಲು ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳದ ಕಾರಣ, ಬಿಜೆಪಿ ಹೈಕಮಾಂಡ್ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಚುನಾವಣಾ ತಯಾರಿಯ ಜೊತೆಗೆ ಉಭಯ ಪಕ್ಷಗಳ ನಡುವೆ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಲು ಕೆಲವೇ ದಿನಗಳಲ್ಲಿ ‘ಮೈತ್ರಿ ಸಮನ್ವಯ ಸಮಿತಿ’ಯನ್ನು ರಚಿಸಲು ನಾಯಕರು ನಿರ್ಧರಿಸಿದ್ದಾರೆ.

ಇದೇ ವೇಳೆ, ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ವಿವಿಧ ವಿಷಯಗಳ ಮೂಲಕ ಇಕ್ಕಟ್ಟಿಗೆ ಸಿಲುಕಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಸದನದ ಒಳಗೆ ಮತ್ತು ಹೊರಗೆ ಸರ್ಕಾರದ ವಿರುದ್ಧ ಜಂಟಿ ಹೋರಾಟ ನಡೆಸುವ ಕುರಿತು ಮೈತ್ರಿ ನಾಯಕರು ಯೋಜನೆ ರೂಪಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS