ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಬೆನ್ನಲ್ಲೇ, ಶಂಕಿತನಿಗೆ ಈ ಬಂದೂಕು ಮತ್ತು ಮದ್ದುಗುಂಡುಗಳು ಹೇಗೆ ಸಿಕ್ಕವು ಎಂಬುದರ ಕುರಿತು ಎಟಿಎಸ್ ತನಿಖೆ ನಡೆಸುತ್ತಿದೆ. ಜೊತೆಗೆ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದಾನೆ ಎಂಬ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಕೆಲವು ತಿಂಗಳುಗಳಲ್ಲಿ ಪಾಕಿಸ್ತಾನದಿಂದ ಹಲವಾರು ಭಯೋತ್ಪಾದಕರು ಒಳನುಸುಳಿರಬಹುದು ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಲು ಹಾಗೂ ಭಯೋತ್ಪಾದಕ ಜಾಲಗಳನ್ನು ಪುನಶ್ಚೇತನಗೊಳಿಸಲು ಈ ಉಗ್ರರು ಯತ್ನಿಸುತ್ತಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆ ವಿದೇಶಿ ಉಗ್ರರನ್ನು ಗುರುತಿಸಿ ಪತ್ತೆಹಚ್ಚಲು ಮತ್ತು ಈ ಪ್ರದೇಶದಲ್ಲಿ ಅವರು ನೆಲೆಯೂರದಂತೆ ತಡೆಯಲು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.









