ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ..

ಹುಲಿಕಲ್ ಘಾಟ್‌ನಲ್ಲಿ (Hulikal Ghat)ಗುಡ್ಡ ಕುಸಿದು ಸಾವನ್ನಪ್ಪಿದ್ದ ಮೂವರು ಕಾರ್ಮಿಕರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

 

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಗಿದೆ. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದನ್ನೂ ಓದಿ: ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

 

ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ (Madhu Bangarappa) ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

 

 

ಮಣ್ಣು ಕುಸಿತದಲ್ಲಿ ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30)ಹಾಗೂ ಕಾರ್ಮಿಕ ಶಬ್ಬೀರ್ (40) ಮೂವರು ಸಾವನ್ನಪ್ಪಿದ್ದಾರೆ. ಮೂವರ ಪೈಕಿ ಇಬ್ಬರ ಶವ ಗುರುವಾರ (ಏ.9) ಪತ್ತೆಯಾಗಿತ್ತು. ಇಂದು (ಏ.10) ಬೆಳಿಗ್ಗೆ ಮತ್ತೋರ್ವ ಕಾರ್ಮಿಕನ ಮೃತದೇಹ ಪತೆಯಾಗಿದೆ.

 

ಮೂರು ಮೃತದೇಹಗಳನ್ನು ನಗರದ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ದುರಂತದಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ನಡೆಸುತ್ತಿದ್ದ ರಕ್ಷಣಾ ಕಾರ್ಯ ಅಂತ್ಯಗೊಂಡಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS