ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ₹183.50 ಕಡಿತ

ಜುಲೈ 1 ರಿಂದ ಅನ್ವಯವಾಗುವಂತೆ ದೇಶಾದ್ಯಂತ 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 183.50 ರೂಪಾಯಿಗಳ ಭಾರಿ ಇಳಿಕೆ ಮಾಡಲಾಗಿದೆ. ಈ ನಿರ್ಧಾರದಿಂದಾಗಿ ಹೋಟೆಲ್, ರೆಸ್ಟೋರೆಂಟ್ ಮತ್ತು ಬೇಕರಿ ಮಾಲೀಕರಿಗೆ ಆರ್ಥಿಕ ಹೊರೆ ಗಣನೀಯವಾಗಿ ಕಡಿಮೆಯಾಗಲಿದೆ.

ನವದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹3,113 ರಿಂದ ₹2,930 ಕ್ಕೆ ಇಳಿಕೆಯಾಗಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗಿದ್ದ ಪೂರೈಕೆ ಒತ್ತಡ ತಗ್ಗಿರುವ ಕಾರಣ ತೈಲ ಕಂಪನಿಗಳು ಈ ಬೆಲೆ ಕಡಿತದ ನಿರ್ಧಾರ ಕೈಗೊಂಡಿವೆ ಎಂದು ವರದಿಯಾಗಿದೆ.

ಆದಾಗ್ಯೂ, ಗೃಹ ಬಳಕೆಯ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಸತತ ಏರಿಕೆ ಕಾಣುತ್ತಿದ್ದ ವಾಣಿಜ್ಯ ಗ್ಯಾಸ್ ದರ ಇದೀಗ ದಿಢೀರ್ ಇಳಿಕೆಯಾಗಿರುವುದು ಸಣ್ಣ ವ್ಯಾಪಾರಿಗಳಿಗೆ ತುಸು ನಿರಾಳತೆ ತಂದಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS