ಡೆಹ್ರಾಡೂನ್: ಬದರಿನಾಥ್ ದೇವಸ್ಥಾನದ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಡೆಹ್ರಾಡೂನ್‌ನಲ್ಲಿ ಬಂಧಿಸಿದೆ. ಬಂಧಿತನನ್ನು ಪ್ರಮೋದ್ ನೌಟಿಯಾಲ್ ಎಂದು ಗುರುತಿಸಲಾಗಿದ್ದು, ಆತ ದೇವಾಲಯದ ಕಾಣಿಕೆ ಮತ್ತು ದೇಣಿಗೆ ಉಸ್ತುವಾರಿ ಅಧಿಕಾರಿಯಾಗಿದ್ದನೆಂದು ತಿಳಿದುಬಂದಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಉತ್ತರಾಖಂಡ ಸರ್ಕಾರ ತನಿಖೆಗೆ ವಿಶೇಷ ಸಮಿತಿ ರಚಿಸಿತ್ತು. ಅದರ ಬೆನ್ನಲ್ಲೇ ಎಸ್‌ಐಟಿ ತನಿಖೆ ಚುರುಕುಗೊಳಿಸಿ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪ್ರಕರಣದ ಸಂಬಂಧ ಹಣದ ದುರುಪಯೋಗ ಹಾಗೂ ದೇಣಿಗೆ ನಿರ್ವಹಣೆಯ ಕುರಿತು ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಇನ್ನಷ್ಟು ಆರೋಪಿಗಳ ಪಾತ್ರವಿದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.










