ಪ್ರೀತಿಸಿ ಮದುವೆಯಾದ ನವವಿವಾಹಿತೆ ಆತ್ಮಹತ್ಯೆ; ನೆಲಮಂಗಲದಲ್ಲಿ ದುರ್ಘಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಸವನಹಳ್ಳಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಘಟನೆಯಿಂದ ಕುಟುಂಬಸ್ಥರಲ್ಲಿ ಶೋಕ ಆವರಿಸಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಗೌರಿಬಿದನೂರಿನ ಬೀರಮ್ಮನಹಳ್ಳಿ ಮೂಲದ 31 ವರ್ಷದ ತನುಜಾ ಎಂದು ಗುರುತಿಸಲಾಗಿದೆ. ಅವರು ಯಲಹಂಕದ ಮಾಯಸಂದ್ರ ನಿವಾಸಿ ರವೀಂದ್ರ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS