ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪತ್ನಿ ಚೆನ್ನಮ್ಮ ನಿಧನ.. ವಯೋಸಹಜ ಅನಾರೋಗ್ಯಕ್ಕೆ ಬಲಿ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪತ್ನಿ ಚೆನ್ನಮ್ಮ ನಿಧನ.. ವಯೋಸಹಜ ಅನಾರೋಗ್ಯಕ್ಕೆ ಬಲಿ

18 Jul 2026, 11:19 pm KANNADA SAKSHI

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಕಳೆದ ಕೆಲವು ದಿನಗಳಿಂದ ತೀವ್ರ ಉಸಿರಾಟದ ತೊಂದರೆ ಹಾಗೂ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಕಳೆದ ಬುಧವಾರ ರಾತ್ರಿ ಚೆನ್ನಮ್ಮ ಅವರಿಗೆ ಏಕಾಏಕಿ ಉಸಿರಾಟದ ಸಮಸ್ಯೆ ಉಲ್ಬಣಗೊಂಡಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರ ವಿಶೇಷ ತಂಡ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರೂ, ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.

ವಯೋಸಹಜ ಕಾರಣಗಳಿಂದ ಚಿಕಿತ್ಸೆಗೂ ದೇಹ ಸ್ಪಂದಿಸದ ಹಿನ್ನೆಲೆಯಲ್ಲಿ ಚೆನ್ನಮ್ಮ ಅವರು ಇಂದು ನಿಧನರಾದರು ಎಂದು ಆಸ್ಪತ್ರೆ ಮೂಲಗಳು ಹಾಗೂ ಕುಟುಂಬದ ಆಪ್ತರು ದೃಢಪಡಿಸಿದ್ದಾರೆ. ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಜೆಡಿಎಸ್ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS