ಭಾರತದಲ್ಲಿ ಮೊದಲ ಡೆಂಗ್ಯೂ ಲಸಿಕೆಗೆ ಅನುಮೋದನೆ: QDENGAಗೆ ಡಿಸಿಜಿಐ ಗ್ರೀನ್ ಸಿಗ್ನಲ್

ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲೇ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (DCGI) ಅನುಮೋದನೆ ನೀಡಿದ್ದಾರೆ.

ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ ಅಭಿವೃದ್ಧಿಪಡಿಸಿರುವ ಈ ಲಸಿಕೆಯನ್ನು 4 ರಿಂದ 60 ವರ್ಷದೊಳಗಿನವರಿಗೆ ನೀಡಲು ಅನುಮತಿ ನೀಡಲಾಗಿದೆ. ಇದರೊಂದಿಗೆ ಭಾರತದಲ್ಲಿ ಮೊದಲ ಡೆಂಗ್ಯೂ ಲಸಿಕೆ ಅಧಿಕೃತವಾಗಿ ಲಭ್ಯವಾಗುತ್ತಿರುವುದು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಡೆಂಗ್ಯೂ ಮೊದಲು ಬಂದಿದ್ದರೂ ಅಥವಾ ಬರದಿದ್ದರೂ ಈ ಲಸಿಕೆಯನ್ನು ಪಡೆಯಬಹುದಾಗಿದೆ. ವಿಶೇಷವೆಂದರೆ, ಲಸಿಕೆ ನೀಡುವ ಮೊದಲು ಡೆಂಗ್ಯೂ ಪರೀಕ್ಷೆ ಮಾಡಿಸಬೇಕಾದ ಅಗತ್ಯವಿಲ್ಲ. ಇದರಿಂದ ಸಾಮಾನ್ಯ ಜನರಿಗೆ ಲಸಿಕೆ ಪಡೆಯುವ ಪ್ರಕ್ರಿಯೆ ಇನ್ನಷ್ಟು ಸುಲಭವಾಗಲಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS