ಶ್ರೀಲಂಕಾ ವಿರುದ್ಧ ಆಗಸ್ಟ್ 7ರಿಂದ ಟೆಸ್ಟ್ ಸರಣಿ: ಟೀಮ್ ಇಂಡಿಯಾಗೆ ಫೈನಲ್ ದೃಷ್ಟಿಯಿಂದ ಮಹತ್ವ

ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 7ರಿಂದ ಆರಂಭವಾಗಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲು ನಾಲ್ಕು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದ್ದು, ನಂತರ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಖಚಿತಪಡಿಸಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್ ದೃಷ್ಟಿಯಿಂದ ಈ ಸರಣಿ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಫೈನಲ್ ಪ್ರವೇಶದ ಸಾಧ್ಯತೆಯನ್ನು ಜೀವಂತವಾಗಿರಿಸಿಕೊಳ್ಳಲು ಟೀಮ್ ಇಂಡಿಯಾ ಈ ಸರಣಿಯಲ್ಲಿ ಗೆಲುವು ಸಾಧಿಸಲೇಬೇಕಾದ ಪರಿಸ್ಥಿತಿ ಎದುರಾಗಿದೆ.

ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 18 ಪಂದ್ಯಗಳನ್ನು ಆಡಬೇಕಾಗಿದ್ದು, ಅದರಲ್ಲಿ ಈಗಾಗಲೇ 9 ಪಂದ್ಯಗಳನ್ನು ಪೂರ್ಣಗೊಳಿಸಿದೆ. ಉಳಿದಿರುವ 9 ಪಂದ್ಯಗಳ ಫಲಿತಾಂಶವೇ ಭಾರತ ತಂಡದ ಫೈನಲ್ ಭವಿಷ್ಯವನ್ನು ನಿರ್ಧರಿಸಲಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS