KPSC ನೇಮಕಾತಿ ಹಗರಣಗಳಲ್ಲೂ ಕಠಿಣ ಕ್ರಮ ಕೈಗೊಳ್ಳಿ: ಸಿ.ಟಿ. ರವಿ ಆಗ್ರಹ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

KPSC ನೇಮಕಾತಿ ಹಗರಣಗಳಲ್ಲೂ ಕಠಿಣ ಕ್ರಮ ಕೈಗೊಳ್ಳಿ: ಸಿ.ಟಿ. ರವಿ ಆಗ್ರಹ

27 Jul 2026, 10:40 am KANNADA SAKSHI

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಇದೇ ಮಾದರಿಯ ಕ್ರಮವನ್ನು ಕರ್ನಾಟಕದ KPSC ಸೇರಿದಂತೆ ವಿವಿಧ ನೇಮಕಾತಿ ಹಗರಣಗಳಲ್ಲೂ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ಅಕ್ರಮಗಳ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ವೇಳೆ ತಮ್ಮ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಕುರಿತು ಪ್ರತಿಕ್ರಿಯಿಸಿದ ಸಿ.ಟಿ. ರವಿ, ತಾವು ಯಾವುದೇ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದರು.

ನೀಟ್ ಪ್ರತಿಭಟನೆಯ ವೇಳೆ ಜೀಪಿನ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಉಲ್ಲೇಖಿಸಿ ಮಾತನಾಡಿದ್ದೇನೆ ಎಂದು ತಿಳಿಸಿದ ಅವರು, "ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ?" ಎಂದು ಪ್ರಶ್ನಿಸಿದ್ದೇ ಹೊರತು, ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು.

Generating image…

ನೀಟ್ ಪ್ರತಿಭಟನೆಯ ವೇಳೆ ಜೀಪಿನ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಉಲ್ಲೇಖಿಸಿ ಮಾತನಾಡಿದ್ದೇನೆ ಎಂದು ತಿಳಿಸಿದ ಅವರು, “ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ?” ಎಂದು ಪ್ರಶ್ನಿಸಿದ್ದೇ ಹೊರತು, ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು.

Editor Reporter
kannadasakshi.in

KPSC ನೇಮಕಾತಿ ಹಗರಣಗಳಲ್ಲೂ ಕಠಿಣ ಕ್ರಮ ಕೈಗೊಳ್ಳಿ: ಸಿ.ಟಿ. ರವಿ ಆಗ್ರಹ

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಇದೇ ಮಾದರಿಯ ಕ್ರಮವನ್ನು ಕರ್ನಾಟಕದ KPSC ಸೇರಿದಂತೆ ವಿವಿಧ ನೇಮಕಾತಿ ಹಗರಣಗಳಲ್ಲೂ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ಅಕ್ರಮಗಳ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ವೇಳೆ ತಮ್ಮ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಕುರಿತು ಪ್ರತಿಕ್ರಿಯಿಸಿದ ಸಿ.ಟಿ. ರವಿ, ತಾವು ಯಾವುದೇ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದರು.

ನೀಟ್ ಪ್ರತಿಭಟನೆಯ ವೇಳೆ ಜೀಪಿನ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಉಲ್ಲೇಖಿಸಿ ಮಾತನಾಡಿದ್ದೇನೆ ಎಂದು ತಿಳಿಸಿದ ಅವರು, "ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ?" ಎಂದು ಪ್ರಶ್ನಿಸಿದ್ದೇ ಹೊರತು, ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS