ಮಂಡ್ಯಕ್ಕೆ ಕೇಂದ್ರದ ಗುಡ್‌ನ್ಯೂಸ್.. ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ಅನುಮೋದನೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಮಂಡ್ಯಕ್ಕೆ ಕೇಂದ್ರದ ಗುಡ್‌ನ್ಯೂಸ್.. ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ಅನುಮೋದನೆ

28 Jul 2026, 1:13 pm KANNADA SAKSHI

ಮಂಡ್ಯ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಜಿಲ್ಲೆಯಲ್ಲಿ 4 ECMP ಕಿಟ್‌ಗಳೊಂದಿಗೆ ಆಧಾರ್ ಸೇವಾ ಕೇಂದ್ರ ಸ್ಥಾಪಿಸಲು ಅನುಮೋದನೆ ನೀಡಿದೆ. ಈ ವಿಷಯವನ್ನು ಹಂಚಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದು ಮಂಡ್ಯ ಜನತೆಗೆ ಸಂತಸದ ಸುದ್ದಿ ಎಂದು ತಿಳಿಸಿದ್ದಾರೆ. ಈಚೆಗೆ ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪಿಸುವಂತೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಡಿಜಿಟಲ್ ಇಂಡಿಯಾ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ತಳಮಟ್ಟದಲ್ಲಿ ಜನರಿಗೆ ಸುಲಭವಾಗಿ, ವೇಗವಾಗಿ ಹಾಗೂ ತಂತ್ರಜ್ಞಾನ ಆಧಾರಿತ ಸಾರ್ವಜನಿಕ ಸೇವೆಗಳನ್ನು ಒದಗಿಸಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಂಡ್ಯದಲ್ಲಿ ಆರಂಭವಾಗಲಿರುವ ಈ ಆಧಾರ್ ಸೇವಾ ಕೇಂದ್ರದಿಂದ ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ಇತರೆ ಸೇವೆಗಳು ಒಂದೇ ಸ್ಥಳದಲ್ಲಿ ಲಭ್ಯವಾಗಲಿವೆ. ಜಿಲ್ಲೆಯ ಜನರಿಗೆ ಇದರಿಂದ ಸಮಯ ಮತ್ತು ಶ್ರಮ ಉಳಿತಾಯವಾಗಲಿದ್ದು, ಆಧಾರ್ ಸಂಬಂಧಿತ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಪಡೆಯುವ ಅವಕಾಶ ದೊರೆಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS