ಬೆಂಗಳೂರು, ಆಗಸ್ಟ್ 15: ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹತ್ವದ ಮಾಹಿತಿ ನೀಡಿದರು.
ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ 1,663 ಕಿ.ಮೀ. ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದರ ಜೊತೆಗೆ 3,000 ಕಿ.ಮೀ. ಪ್ರಮುಖ ಜಿಲ್ಲಾ ರಸ್ತೆಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕೈಗೊಳ್ಳಲಾಗಿದ್ದು, 125 ಹೊಸ ಸೇತುವೆಗಳನ್ನೂ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಪ್ರಗತಿಪಥ ಯೋಜನೆಯಡಿ ₹5,200 ಕೋಟಿ ಹೂಡಿಕೆಯೊಂದಿಗೆ 7,100 ಕಿ.ಮೀ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಮೂಲಕ ರಾಜ್ಯದ ರಸ್ತೆ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.










