ಬೆಂಗಳೂರು ಕರಡು ಮತದಾರರ ಪಟ್ಟಿಯಲ್ಲಿ 56.99 ಲಕ್ಷ ಮತದಾರರು: ಮಹೇಶ್ವರ್ ರಾವ್

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಬೆಂಗಳೂರು ಕರಡು ಮತದಾರರ ಪಟ್ಟಿಯಲ್ಲಿ 56.99 ಲಕ್ಷ ಮತದಾರರು: ಮಹೇಶ್ವರ್ ರಾವ್

24 Aug 2026, 11:58 pm KANNADA SAKSHI

ಬೆಂಗಳೂರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು 56,99,660 ಮತದಾರರು ದಾಖಲಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹೇಶ್ವರ್ ರಾವ್ ತಿಳಿಸಿದ್ದಾರೆ. ಕರಡು ಪಟ್ಟಿಯಲ್ಲಿರುವ ಒಟ್ಟು ಮತದಾರರ ಪೈಕಿ 27,69,866 ಪುರುಷರು ಹಾಗೂ 29,29,092 ಮಹಿಳೆಯರು ಇದ್ದಾರೆ. ಇದಲ್ಲದೆ, 702 ಇತರೆ ಹಾಗೂ ತೃತೀಯ ಲಿಂಗದ ಮತದಾರರು ಪಟ್ಟಿಯಲ್ಲಿ ದಾಖಲಾಗಿದ್ದಾರೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಭಾಗವಾಗಿ ಮುಂದಿನ ಪ್ರಕ್ರಿಯೆ ನಡೆಯಲಿದೆ. ಕರಡು ಪಟ್ಟಿಯಲ್ಲಿ ತಮ್ಮ ಹೆಸರು, ವಿವರಗಳಲ್ಲಿ ಯಾವುದೇ ದೋಷಗಳಿದ್ದರೆ ಅಥವಾ ಆಕ್ಷೇಪಣೆಗಳಿದ್ದರೆ ನಿಗದಿತ ಅವಧಿಯಲ್ಲಿ ಸಲ್ಲಿಸಲು ಮತದಾರರಿಗೆ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರಗೊಳಿಸುವ ಉದ್ದೇಶ ಹೊಂದಲಾಗಿದೆ.

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS