ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: MPSC ಡ್ರಗ್ ಇನ್ಸ್‌ಪೆಕ್ಟರ್ ನೇಮಕಾತಿ ಪ್ರಕ್ರಿಯೆ ರದ್ದು

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: MPSC ಡ್ರಗ್ ಇನ್ಸ್‌ಪೆಕ್ಟರ್ ನೇಮಕಾತಿ ಪ್ರಕ್ರಿಯೆ ರದ್ದು

26 Aug 2026, 3:49 pm KANNADA SAKSHI

ಮುಂಬೈ: ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ನಡೆಸಿದ್ದ ಆಹಾರ ಮತ್ತು ಔಷಧ ಆಡಳಿತ ಇಲಾಖೆಯ ಡ್ರಗ್ ಇನ್ಸ್‌ಪೆಕ್ಟರ್‌ (Group-B) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 22ರಂದು ನಡೆದ ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಹಾಗೂ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನ ಪ್ರಶ್ನೆಗಳು ಲಭ್ಯವಾಗಿದ್ದವು ಎಂಬ ದೂರುಗಳ ಹಿನ್ನೆಲೆಯಲ್ಲಿ ನಡೆಸಿದ ಪ್ರಾಥಮಿಕ ವಿಚಾರಣೆಯ ಬಳಿಕ ಆಯೋಗ ಈ ನಿರ್ಧಾರ ಕೈಗೊಂಡಿದೆ.

ಈ ನೇಮಕಾತಿಗಾಗಿ ಮಾರ್ಚ್ 22ರಂದು ಮಹಾರಾಷ್ಟ್ರದ ಆರು ವಿಭಾಗೀಯ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಜೂನ್ 12ರಂದು ಫಲಿತಾಂಶ ಪ್ರಕಟವಾಗಿದ್ದು, 506 ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹತೆ ಪಡೆದಿದ್ದರು. ಜುಲೈ 1ರಿಂದ 22ರವರೆಗೆ 488 ಅಭ್ಯರ್ಥಿಗಳ ಸಂದರ್ಶನ ನಡೆಸಲಾಗಿತ್ತು. ಬಳಿಕ ಜುಲೈ 22ರಿಂದ 26ರ ನಡುವೆ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಅಥವಾ ಅದರಲ್ಲಿದ್ದ ಪ್ರಶ್ನೆಗಳು ಲಭ್ಯವಾಗಿದ್ದವು ಎಂಬ ದೂರುಗಳು ಆಯೋಗಕ್ಕೆ ಬಂದಿದ್ದವು.

ದೂರುಗಳ ಹಿನ್ನೆಲೆಯಲ್ಲಿ ಆಯೋಗ ತನಿಖೆ ಕೈಗೊಂಡಿದ್ದು, ಇದೀಗ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ. ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಥವಾ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ತಿಳಿಸಲಾಗಿದ್ದು, ಹೊಸದಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ. ಹೊಸ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. (abplive.com)

Generating image…

Editor Reporter

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS